ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು! 30,836 ಮತಗಳ ಅಂತರದಿಂದ ಭಾರಿ ಜಯ

ಸಿಂದಗಿ ಕ್ಷೇತ್ರದ ಉಪ ಚುನಾವಣೆಯ 22 ಸುತ್ತಿನ ಮತ ಎಣಿಕೆಯಲ್ಲಿ ಎಲ್ಲಾ ಸುತ್ತುಗಳಲ್ಲಿ ಮುನ್ನಡೆ ಸಾಧಿಸಿಕೊಂಡು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 30 ಸಾವಿರಕಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ.
ಗೆಲುವಿನ ನಗೆ ಬೀರುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ
ಗೆಲುವಿನ ನಗೆ ಬೀರುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ
Updated on

ಸಿಂದಗಿ(ವಿಜಯಪುರ): ಸಿಂದಗಿ ಕ್ಷೇತ್ರದ ಉಪ ಚುನಾವಣೆಯ 22 ಸುತ್ತಿನ ಮತ ಎಣಿಕೆಯಲ್ಲಿ ಎಲ್ಲಾ ಸುತ್ತುಗಳಲ್ಲಿ ಮುನ್ನಡೆ ಸಾಧಿಸಿಕೊಂಡು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 30 ಸಾವಿರಕಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ.

ಪ್ರತಿ ಸುತ್ತಿನಲ್ಲಿಯೂ ಭೂಸನೂರ ತಮ್ಮ ನಿಕಟಸ್ಪರ್ಧಿ ಕಾಂಗ್ರೆಸ್ ನ ಅಶೋಕ್ ಮನಗುಳಿಯವರಿಗಿಂತ 2,500 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದರು. ವಿಜಯಪುರದ ವಡೆಯರ್ ಭವನ ಸೈನಿಕ ಶಾಲೆಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. 

ಬಿಜೆಪಿ 93,380 ಮತಗಳನ್ನು ಪಡೆದುಕೊಂಡಿದೆ, ಕಾಂಗ್ರೆಸ್ 62,292 ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ ಮತ್ತು ಜೆಡಿಎಸ್ (ಎಸ್) ಕೇವಲ 4,321 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನದಲ್ಲಿದೆ, ಅಲ್ಲಿ ಅದು ಠೇವಣಿ ಕಳೆದುಕೊಂಡಿತು. ಇದೇ ವೇಳೆ 1,029 ಮಂದಿ ನೋಟಾಕ್ಕೆ ಮತ ನೀಡಿದ್ದಾರೆ. ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.69.47ರಷ್ಟು ಮತದಾನವಾಗಿದೆ.

ರಮೇಶ ಭೂಸನೂರ ಅವರು ಸಿಂದಗಿ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಒಂದೇ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾದ ಮೊದಲ ರಾಜಕಾರಣಿಯಾಗಿದ್ದಾರೆ. 

ಈ ಸಂದರ್ಭದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ ರಮೇಶ ಭೂಸನೂರ, “ನಾನು 25,000 ಮತಗಳ ಅಂತರದಿಂದ ಚುನಾವಣೆಯಲ್ಲಿ ಗೆಲ್ಲುತ್ತೇನೆ ಎಂದು ವಿಶ್ವಾಸ ಹೊಂದಿದ್ದೆ ಆದರೆ ಜನರು ನನ್ನನ್ನು 31,088 ಮತಗಳ ಮುನ್ನಡೆಯೊಂದಿಗೆ ಆಯ್ಕೆ ಮಾಡಿದ್ದಾರೆ. ನನ್ನ ಮತ್ತು ನನ್ನ ಪಕ್ಷದ ಮೇಲೆ ವಿಶ್ವಾಸ ತುಂಬಿದ ಮತದಾರರಿಗೆ ನಾನು ಧನ್ಯವಾದ ಹೇಳುತ್ತೇನೆ. ನನ್ನ ಗೆಲುವಿಗಾಗಿ ಸಚಿವರಾದ ವಿ ಸೋಮಣ್ಣ, ಸಿ ಸಿ ಪಾಟೀಲ್ ಮತ್ತು ಗೋವಿಂದ್ ಕಾರಜೋಳ ಸೇರಿದಂತೆ ಹಿರಿಯ ನಾಯಕರು ಮೂರು ವಾರಗಳ ಕಾಲ ಕ್ಷೇತ್ರದಲ್ಲಿ ತೀವ್ರ ಪ್ರಚಾರ ನಡೆಸಿದರು ಎಂದು ಹೇಳಿದರು. 

ಬಿಜೆಪಿ ಮುಸ್ಲಿಂ ವಿರೋಧಿ ಪಕ್ಷ ಎಂಬ ಅಪಪ್ರಚಾರವನ್ನು ಕಾಂಗ್ರೆಸ್ ಹಬ್ಬಿಸಿತ್ತು. ಅಲ್ಪಸಂಖ್ಯಾತ ಸಮುದಾಯದ ಕನಿಷ್ಠ 4,000 ಜನರು ನನಗೆ ಮತ ಹಾಕಿದ್ದಾರೆ. ಕಾಂಗ್ರೆಸ್ ನವರ ಸುಳ್ಳು ಅವರನ್ನು ನೆಲಕಚ್ಚಿಸಿದೆ, ಮುಸಲ್ಮಾನರು ಸಹ ಬಿಜೆಪಿಯೊಂದಿಗೆ ಇದ್ದಾರೆ ಎಂಬುದನ್ನು ಸಾಬೀತುಪಡಿಸುತ್ತದೆ ಎಂದರು.

ಜೆಡಿಎಸ್ ಅಭ್ಯರ್ಥಿ ಕೇವಲ 4,321 ಮತಗಳನ್ನು ಪಡೆದಿದ್ದು, ಚುನಾವಣೆಯಲ್ಲಿ ಯಾವುದೇ ಪ್ರಭಾವ ಬೀರಲಿಲ್ಲ. ಸಿಂದಗಿಯ ಜನರು ನನ್ನ ಮೇಲೆ ನಂಬಿಕೆ ಇಟ್ಟಿರುವುದರಿಂದ ಅವರ ನಿರೀಕ್ಷೆಗೆ ತಕ್ಕಂತೆ ಪ್ರಯತ್ನಿಸುತ್ತೇನೆ ಎಂದು ಬಿಜೆಪಿಯ ನೂತನ ಶಾಸಕ ಭೂಸನೂರ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com