ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಸಂಜೆ ಬೆಂಗಳೂರಿಗೆ ಆಗಮನ, ನಾಳೆ ಮಹತ್ವದ ಸಭೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದು,ಭೇಟಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಚರ್ಚಿತ ವಿಷಯಗಳನ್ನು ರಾಜ್ಯ ಬಿಜೆಪಿಗೆ ಮುಟ್ಟಿಸಿ ಪಕ್ಷ ಸಂಘಟನೆ ಕುರಿತು ರಾಜ್ಯ ನಾಯಕರೊಂದಿಗೆ ಚರ್ಚಿಸಲಿದ್ದಾರೆ.
ArunSingh
ArunSingh
Updated on

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಭೇಟಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಚರ್ಚಿತ ವಿಷಯಗಳನ್ನು ರಾಜ್ಯ ಬಿಜೆಪಿಗೆ ಮುಟ್ಟಿಸಿ ಪಕ್ಷ ಸಂಘಟನೆ ಕುರಿತು ರಾಜ್ಯ ನಾಯಕರೊಂದಿಗೆ ಚರ್ಚಿಸಲಿದ್ದಾರೆ.

ಇಂದು ಸಂಜೆ 6.25 ಗಂಟೆಗೆ ಬೆಂಗಳೂರಿನ ವಿಮಾನನಿಲ್ದಾಣಕ್ಕೆ ಆಗಮಿಸುವ ಅವರು ಬಳಿಕ ಕೆ.ಕೆ.ಗೆಸ್ಟ್ ಹೌಸ್ ಗೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ. ನಾಳೆ ಮಂಗಳವಾರ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ, ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ಚುನಾವಣಾ ಸಿದ್ಧತಾ ಸಭೆ, ಪಕ್ಷದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸುವರು.

ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಬಿಬಿಎಂಪಿಯಲ್ಲಿ ಪಕ್ಷದ ಪ್ರಸಕ್ತ ಸ್ಥಿತಿಗತಿ ಕುರಿತು ಮಾಹಿತಿ ಪಡೆಯಲಿದ್ದಾರೆ.ಸಿಂಧಗಿ ಹಾನಗಲ್ ಉಪಚುನಾವಣೆಯ ಅವಲೋಕನ ಮಾಡಲಿರುವ ಅರುಣ್ ಸಿಂಗ್ ಹಾನಗಲ್ ಸೋಲಿನ ಕಾರಣವನ್ನೂ ಸಮಗ್ರವಾಗಿ ಚರ್ಚಿಸಲಿದ್ದಾರೆ. 

ಅಲ್ಲದೇ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಚರ್ಚಿದ ವಿಷಯಗಳು ಕಾರ್ಯಕರ್ತರನ್ನು ಪಕ್ಷ ಗೌರವಿಸುವ ಜೊತೆಗೆ ಕಾರ್ಯಕರ್ತರು ಪಕ್ಷಕ್ಕೆ ಇನ್ನಷ್ಟು ಬಲತುಂಬುವ ಬಗ್ಗೆ ಅರುಣ್ ಸಿಂಗ್ ಚರ್ಚಿಸಲಿದ್ದಾರೆ.ಬಳಿಕ ರಾತ್ರಿ ಅಕೆ.ಕೆ.ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿ ಬುಧವಾರ ಬೆಳಿಗ್ಗೆ  ದೆಹಲಿಗೆ ಹಿಂತಿರುಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com