ನನ್ನನ್ನು ಜಾತಿವಾದಿ ಎಂದು ಬಿಂಬಿಸಲು ಬಿಜೆಪಿ ಷಡ್ಯಂತ್ರ ರೂಪಿಸಿದೆ: ಸಿದ್ದರಾಮಯ್ಯ

ನನ್ನನ್ನು ಜಾತಿವಾದಿ ಎಂದು ಬಿಂಬಿಸಲು ಬಿಜೆಪಿ ಷಡ್ಯಂತ್ರ ರೂಪಿಸಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಮೈಸೂರು: ನನ್ನನ್ನು ಜಾತಿವಾದಿ ಎಂದು ಬಿಂಬಿಸಲು ಬಿಜೆಪಿ ಷಡ್ಯಂತ್ರ ರೂಪಿಸಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಕನಕ ಭವನದ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ವರಸಿದ್ಧಿ ವಿನಾಯಕ ದೇವಸ್ಥಾನ ಲೋಕಾರ್ಪಣೆ ಹಾಗೂ ಅತಿಥಿ ಗೃಹ ಉದ್ಘಾಟನೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಜಾತಿ ರಾಜಕಾರಣ ಮಾಡುತ್ತಿದ್ದಾರೆಂದು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ವಾಸ್ತವದಲ್ಲಿ ಜಾತಿ ಕೊಳಕರೇ ಜಾತಿ ಮಾಡುವವರು. ನಾನು ಮುಖ್ಯಮಂತ್ರಿ ಆಗುತ್ತೇನೆಂಬ ಹೊಟ್ಟೆ ಉರಿ ಅವರಿಗೆ. ಅದಕ್ಕಾಗಿ ನನ್ನದು ಜಾತಿ ಮನಸ್ಥಿತಿ, ಜಾತಿವಾದಿ ಎಂದೆಲ್ಲಾ ಕೆಟ್ಟದಾಗಿ ಹೇಳಿಕೊಂಡು ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ ನೀವು ಅವರ ಬಗ್ಗೆ ಹುಷಾರಾಗಿರಿ ಎಂದು ಎಚ್ಚರಿಸಿದ್ದಾರೆ.

ನಾನು ಕೊಟ್ಟ ಯೋಜನೆಗಳು ಒಂದು ಜಾತಿಗೆ ಸೀಮಿತವಾಗಿಲ್ಲ. ಅವಕಾಶದಿಂದ ವಂಚಿತರಾದವರ ಪರ ಕೆಲಸ ಮಾಡಿದ್ದೇನೆ. ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ಟಿಪ್ಪು ಸುಲ್ತಾನ್, ಭಗೀರಥ, ಕೃಷ್ಣ, ಜೈನ ಹೀಗೆ ಎಲ್ಲಾ ಜಾತಿಯ ನಾಯಕರ ಜಯಂತಿ ಮಾಡಿದ್ದು. ನಾನು. ಆದರೂ ಸಿದ್ದರಾಮಯ್ಯ ಜಾತಿವಾದಿ, ಜಾತಿ ಮನಸ್ಸಿನವನು ಎಂದು ಟೀಕಿಸುತ್ತಾರೆ. ಕೆಲವು ಜಾತಿ ಮಾಡುವ ಕೊಳಕು ಮನಸ್ಸಿನವರು ನನ್ನ ವಿರುದ್ಧ ಆರೋಪ ಮಾಡುತ್ತಾರೆಂದು ತಿರುಗೇಟು ನೀಡಿದರು.

ಅರಸು ಬಳಿಕ ಸಿಎಂ ಆಗಿ ಐದು ವರ್ಷ ಪೂರ್ಣಾವಧಿ ಆಡಳಿತ ಮಾಡಿದ್ದು ನಾನು. ಹೀಗಾಗಿ ಅವರಿಗೆ ಹೊಟ್ಟೆ ಕಿಚ್ಚು. ಕುರುಬರ ಸಂಘದ ಕಾರ್ಯಕ್ರಮದಲ್ಲಿ ಇತರೆ ಜಾತಿಯವರು ನನ್ನ ಜೊತೆ ಇದ್ದಾರೆ. ಬಹಳಷ್ಟು ಒಕ್ಕಲಿಗರು ನನ್ನ ಜೊತೆ ಬಂದಿದ್ದಾರೆ. ಆದರೂ ಕೆಲವರು ನನ್ನನ್ನು ಒಕ್ಕಲಿಗರ ವಿರೋಧಿ ಎನ್ನುವರು, ನನ್ನ ಟೀಕಿಸುವುದೇ ಬಿಜೆಪಿಯವರ ಗುರಿ ಎಂದು ಮೂದಲಿಸಿದರು.

ನನ್ನ ಫ್ಲೆಕ್ಸ್ ಸುಟ್ಟ ತಕ್ಷಣ ನಾನು ಸುಟ್ಟು ಹೋಗಲ್ಲ. ನನ್ನ ಜನ, ನನ್ನ ಪ್ರೀತಿಸುವವರು ಸುಟ್ಟು ಬೂದಿಯಾಗಲ್ಲ. ಜಾತಿ ವ್ಯವಸ್ಥೆ ದೂರವಾಗಬೇಕು. ಎಲ್ಲಾ ಜಾತಿಯ ಬಡವರ ಅಭಿವೃದ್ಧಿಯಾಗಬೇಕು ಎಂದರು.

ಇದೇ ವೇಳೆ ಬಿಜೆಪಿ ಹಿಂದುಳಿದ ವರ್ಗಗಳ ವಿರುದ್ಧವಾಗಿದೆ ಎಂದು ಹೇಳಿದ ಅವರು, ಬಿಜೆಪಿಗೆ ಸೇರದಂತೆ ಜನತೆಗೆ ಕರೆ ನೀಡಿದರು.

ಬಳಿಕ ಬಡವರಿಗಾಗಿ ನೀತಿಗಳನ್ನು ಜಾರಿಗೆ ತರಲು ಕಾಂಗ್ರೆಸ್‌ಗೆ ಬೆಂಬಲ ನೀಡುವಂತೆ ಕೋರಿದ ಅವರು, ರಾಜ್ಯದಲ್ಲಿ ಇದೀಗ ಕಾಂಗ್ರೆಸ್ ಪರವಾಗಿ ಜನರ ಮನಸ್ಥಿತಿ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com