ಹಬ್ಬುತ್ತಿರುವ ವದಂತಿಗಳಿಗೆ ಆಧಾರವಿಲ್ಲ, ಬೊಮ್ಮಾಯಿ ಬದಲಾವಣೆಯಿಲ್ಲ: ಬಿ.ಎಸ್. ಯಡಿಯೂರಪ್ಪ

ಬಿಟ್ ಕಾಯಿನ್ ಹಗರಣದಲ್ಲಿ ಬಸವರಾಜ ಬೊಮ್ಮಾಯಿ ತಲೆದಂಡವಾಗಲಿದೆ ಎಂಬುದನ್ನು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ
ಮಾಜಿ ಸಿಎಂ ಯಡಿಯೂರಪ್ಪ
Updated on: 

ತುಮಕೂರು: ಬಿಟ್ ಕಾಯಿನ್ ಹಗರಣದಲ್ಲಿ ಬಸವರಾಜ ಬೊಮ್ಮಾಯಿ ತಲೆದಂಡವಾಗಲಿದೆ ಎಂಬುದನ್ನು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಜನರ ನಿರೀಕ್ಷೆ ಹೈಕಮಾಂಡ್ ನಿರೀಕ್ಷೆಯಂತೆ ಬಹಳ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಅವರ ಬದಲಾವಣೆ ಕುರಿತು ಹಬ್ಬುತ್ತಿರುವ ವದಂತಿಗಳಿಗೆ ಯಾವುದೇ ಆಧಾರ ಇಲ್ಲ ಎಂದು ನಿರಾಕರಿಸಿದರು.

ಈಗಾಗಲೇ ಮುಖ್ಯಮಂತ್ರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿದ್ದಾರೆ. ಈ ಪ್ರಕರಣ ಪ್ರಧಾನಿ ಮೋದಿಯವರ ಗಮನಕ್ಕೂ ಬಂದಿದ್ದು, ಖಂಡಿತವಾಗಿಯೂ ಇದು ಪ್ರಮುಖವಾಗ ವಿಚಾರವಾಗಿದೆ. ಯಾರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೋ ಅವರ ವಿರುದ್ಧ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಿಎಂ ಬೊಮ್ಮಾಯಿಯವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯಾಗಿ ಅವರು ಅವಧಿ ಪೂರ್ಣಗೊಳಿಸುತ್ತಾರೆ. ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಇದೇ ವೇಳ ಸ್ಪಷ್ಟಪಡಿಸಿದ್ದಾರೆ.

ಜತೆಗೆ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಯಾವುದೇ ಪ್ರಸ್ತಾಪ ಇಲ್ಲ ಎಂದು ತಿಳಿಸಿದರು. ಶೆಟ್ಟರ್ ದೆಹಲಿ ಭೇಟಿ ಕುರಿತು ಪ್ರತಿಕ್ರಿಯಿಸಿ, ಅವರ ಜೊತೆಗೆ ಮಾತನಾಡಿದ್ದೇನೆ. ವೈಯಕ್ತಿಕ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದೇನೆಂದು ತಿಳಿಸಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com