ರಾಜಕೀಯ

ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ: ಜಗದೀಶ್ ಶೆಟ್ಟರ್‌- ಬಿ ಎಸ್ ಯಡಿಯೂರಪ್ಪ ಭೇಟಿ

ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ: ಜಗದೀಶ್ ಶೆಟ್ಟರ್‌- ಬಿ ಎಸ್ ಯಡಿಯೂರಪ್ಪ ಭೇಟಿ
ಜಗದೀಶ್ ಶೆಟ್ಟರ್ ಮತ್ತು ಯಡಿಯೂರಪ್ಪ
Published On :

ಬೆಂಗಳೂರು: ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಧಾನಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ವಾಪಸಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ದೆಹಲಿಗೆ ತೆರಳಿರುವುದು ತೀವ್ರ ಕುತೂಹಲ ಮೂಡಿಸಿತ್ತು.

ಇದೀಗ ದೆಹಲಿಯಿಂದ ವಾಪಸಾಗಿರುವ ಜಗದೀಶ್ ಶೆಟ್ಟರ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಮಾಡಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಶುಕ್ರವಾರ ಮಧ್ಯಾಹ್ನ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಿದ್ದ ಶೆಟ್ಟರ್ ಯಡಿಯೂರಪ್ಪರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದರು. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದರು.

ಒಂದಿಷ್ಟು ರಾಜಕೀಯ ಪಕ್ಷದ ಬಗ್ಗೆ ವಿವರಣೆ ನೀಡಿದ್ದ ಶೆಟ್ಟರ್, ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ನಂತರ ಅಭ್ಯರ್ಥಿಗಳ ಪರ ವಕಾಲತ್ತು ವಹಿಸಿ ಸಹೋದರ ಪ್ರದೀಪ್ ಶೆಟ್ಟರ್‌ಗೆ ಟಿಕೆಟ್ ನೀಡುವಂತೆ ವರಿಷ್ಠರಲ್ಲಿ ಮನವಿ ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.