ರಾಜ್ಯ ವಕ್ಫ್ ಮಂಡಳಿಗೆ ಪ್ರಥಮ ಬಾರಿಗೆ ಬಿಜೆಪಿ ಅಭ್ಯರ್ಥಿ ಆಯ್ಕೆ

ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾಗಿ ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಯಾದ ಮಹಮದ್ ಷಫಿ ಸಾ-ಆದಿ ಆಯ್ಕೆಯಾಗಿದ್ದು, ಅವರನ್ನು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸ್ವಾಗತಿಸಿ ಅಭಿನಂದಿಸಿದ್ದಾರೆ.
ಸಚಿವರಾದ ಶಶಿಕಲಾ ಜೊಲ್ಲೆ, ಜೆ. ಸಿ. ಮಾಧುಸ್ವಾಮಿ, ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮಹಮದ್ ಷಫಿ ಸಾ-ಆದಿ ಮತ್ತಿತರರು
ಸಚಿವರಾದ ಶಶಿಕಲಾ ಜೊಲ್ಲೆ, ಜೆ. ಸಿ. ಮಾಧುಸ್ವಾಮಿ, ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮಹಮದ್ ಷಫಿ ಸಾ-ಆದಿ ಮತ್ತಿತರರು

ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾಗಿ ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಯಾದ ಮಹಮದ್ ಷಫಿ ಸಾ-ಆದಿ ಆಯ್ಕೆಯಾಗಿದ್ದು, ಅವರನ್ನು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸ್ವಾಗತಿಸಿ ಅಭಿನಂದಿಸಿದ್ದಾರೆ.

ಬುಧವಾರ ಕರ್ನಾಟಕ ವಕ್ಫ್ ಮಂಡಳಿಗೆ ಭೇಟಿ ನೀಡಿ ರಾಜ್ಯ ವಕ್ಫ್ ಮಂಡಳಿ ನೂತನ ಅಧ್ಯಕ್ಷರಾಗಿ ಚುನಾಯಿತರಾದ ಮಹಮದ್ ಷಫಿ ಸಾ-ಆದಿಯವರನ್ನು ಅಭಿನಂದಿಸಿ ಮಾತನಾಡಿದ ಅವರು, ಯಾವುದೇ ಸಮುದಾಯ ಮೊದಲು ಶೈಕ್ಷಣಿಕವಾಗಿ ಅಭಿವೃದ್ಧಿಯಾದರೆ ಮಾತ್ರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ಮುಸ್ಲಿಂ ಸಮುದಾಯದ ಮಕ್ಕಳು  ಮತ್ತು ಮಹಿಳೆಯರ ಅಭಿವೃದ್ಧಿ ಕಡೆಗೂ ಮಂಡಳಿಯು ಹೆಚ್ಚಿನ ಗಮನ ಹರಿಸಬೇಕು. ಎಲ್ಲ ಸಮುದಾಯಗಳ ಅಭಿವೃದ್ಧಿಯಾದರೆ ಮಾತ್ರವೇ ರಾಷ್ಟ್ರ ಹಾಗೂ ಇಡೀ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಅಭಿವೃದ್ಧಿಯು ಕೇವಲ ಭೌತಿಕವಾಗಿರದೇ ಅದು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ವಕ್ಫ್ ಮಂಡಳಿ, ವಕ್ಫ್ ಕೌನ್ಸಿಲ್‍ನಂತಹ ಅಂಗಗಳು ಹೆಚ್ಚಿನ ಕೆಲಸ ಮಾಡಬೇಕು ಎಂದು ಶಶಿಕಲಾ ಜೊಲ್ಲೆ ಕಿವಿಮಾತು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com