ರಾಜಕೀಯ

'ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು'

ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

'ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು'
ನರೇಂದ್ರ ಮೋದಿ
Published On :

ಬೆಂಗಳೂರು: ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ‌ ಅಭೂತಪೂರ್ವ ಹೋರಾಟಕ್ಕೆ‌ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದಿದ್ದಾರೆ.

ಕೃಷಿ‌ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ‌ ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ.

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ,
ಕೃಷಿ ಕಾಯ್ದೆ‌ಯಷ್ಟೇ ಅಲ್ಲ, ಕೇಂದ್ರ ಬಿಜೆಪಿ‌ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು ಎಂದಿದ್ದಾರೆ.

ಇದು ವಿರಮಿಸುವ ಕಾಲ ಅಲ್ಲ,‌ ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ. ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ‌‌ ಸ್ಪೂರ್ತಿ  ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.