ಕೃಷಿ ಮಸೂದೆ: ಕೇಂದ್ರ ಸರ್ಕಾರದ ನಿರ್ಧಾರ ಶ್ಲಾಘಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಕೇಂದ್ರ ಸರ್ಕಾರವು ಮೂರು ಕೃಷಿ ಕಾನೂನುಗಳನ್ನು ಈ ಹಿಂದೆಯೇ ಹಿಂತೆಗೆದುಕೊಳ್ಳುವ ಘೋಷಣೆ ಮಾಡಬೇಕಿತ್ತು ಎಂದು ಒಪ್ಪಿಕೊಂಡಿರುವ ಬಿಜೆಪಿ ಹಿರಿಯ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಸ್ವಲ್ಪ ತಡವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶನಿವಾರ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ನಡೆದ ಜನಸ್ವರಾಜ್ ಯಾತ್ರೆಯಲ್ಲಿ ಬಿ.ಎಸ್.ಯಡಿಯೂರಪ್ಪ
ಬಾಗಲಕೋಟೆಯಲ್ಲಿ ನಡೆದ ಜನಸ್ವರಾಜ್ ಯಾತ್ರೆಯಲ್ಲಿ ಬಿ.ಎಸ್.ಯಡಿಯೂರಪ್ಪ
Updated on

ಬಾಗಲಕೋಟೆ/ವಿಜಯಪುರ: ಕೇಂದ್ರ ಸರ್ಕಾರವು ಮೂರು ಕೃಷಿ ಕಾನೂನುಗಳನ್ನು ಈ ಹಿಂದೆಯೇ ಹಿಂತೆಗೆದುಕೊಳ್ಳುವ ಘೋಷಣೆ ಮಾಡಬೇಕಿತ್ತು ಎಂದು ಒಪ್ಪಿಕೊಂಡಿರುವ ಬಿಜೆಪಿ ಹಿರಿಯ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಸ್ವಲ್ಪ ತಡವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶನಿವಾರ ಹೇಳಿದ್ದಾರೆ.

ಬಿಜೆಪಿಯ ಜನಸ್ವರಾಜ್ ಯಾತ್ರೆಯ ಸಂದರ್ಭದಲ್ಲಿ ಶನಿವಾರ ಬಾಗಲಕೋಟೆಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕೃಷಿ ಮಸೂದೆ ಹಿಂಪಡೆದ ನಿರ್ಧಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದರು.

“ಪ್ರಧಾನಿ ಮೋದಿ ಇದನ್ನು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಿಲ್ಲ. ಅವರು ಉತ್ತಮ ಕಾರ್ಯವನ್ನು ಮಾಡಿದ್ದಾರೆ, ಅದನ್ನು ಎಲ್ಲರೂ ಸ್ವಾಗತಿಸುತ್ತಾರೆ. ಅವರನ್ನು ಟೀಕಿಸುವುದನ್ನು ನಿಲ್ಲಿಸುವಂತೆ ನಾನು ಪ್ರತಿಪಕ್ಷಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆ. ಕಳೆದ ಒಂದು ವರ್ಷದಿಂದ ಕಾನೂನನ್ನು ವಿರೋಧಿಸುತ್ತಿದ್ದ ರೈತರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಡಿಸೆಂಬರ್ 10 ರಂದು ನಡೆಯಲಿರುವ ಪರಿಷತ್ತಿನ ಚುನಾವಣೆಯಲ್ಲಿ ಬಿಜೆಪಿ ತಾನು ಸ್ಪರ್ಧಿಸುತ್ತಿರುವ 20 ಸ್ಥಾನಗಳ ಪೈಕಿ 15 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.

''ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಚುನಾವಣೆ ನಡೆಯಲಿರುವ 25 ಸ್ಥಾನಗಳ ಪೈಕಿ 20ರಲ್ಲಿ ನಾವು ಸ್ಪರ್ಧಿಸಲಿದ್ದೇವೆ. ಮೇಲ್ಮನೆಯಲ್ಲಿ ನಮಗೆ ಬಹುಮತವಿಲ್ಲ. ಬಹುಮತ ಸಾಧಿಸಲು ನಾವು ಕನಿಷ್ಠ 12 ಸ್ಥಾನಗಳಲ್ಲಿ ಗೆಲ್ಲಬೇಕಿದೆ ಎಂದು ತಿಳಿಸಿದ್ದಾರೆ.

ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಪಿಎಚ್ ಪೂಜಾರ್'ನ್ನು ಪಕ್ಷದಿಂದ ಕಣಕ್ಕಿಳಿಸುವ ಕುರಿತು ಪ್ರತಿಕ್ರಿಯಿಸಿದ ಅವರು, ಪೂಜಾರ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಕ್ಷವನ್ನು ಬಲಪಡಿಸಲು ನಾನು ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಅವರು ನನ್ನೊಂದಿಗೆ ಕೆಲಸ ಮಾಡಿದ್ದಾರೆ. ಅವರು ಈ ಪ್ರದೇಶದಲ್ಲಿ ಪಕ್ಷವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪರಿಷತ್ ಚುನಾವಣೆಯ ನಂತರ ಪಕ್ಷವನ್ನು ಬಲಪಡಿಸಲು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಪುನರುಚ್ಚರಿಸಿದ್ದಾರೆ.

ಬಳಿಕ ರಾಜಕೀಯದಿಂದ ನಿವೃತ್ತಿ ಹೊಂದುವ ಕುರಿತ ಪ್ರಶ್ನೆಗೆ ಉತ್ತರಿಸಿದ, ನಾನು ಅದರ ಬಗ್ಗೆ ಯೋಚಿಸಿಲ್ಲ. ಈಗಷ್ಟೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಸರ್ಕಾರದಲ್ಲಿ ಯಾವುದೇ ಹುದ್ದೆ ಪಡೆಯುವ ಆಸೆ ನನಗಿಲ್ಲ. ನಾನು ಪಕ್ಷವನ್ನು ಬಲಪಡಿಸುವತ್ತ ಮಾತ್ರ ಗಮನಹರಿಸುತ್ತಿದ್ದೇನೆ... 2023 ರಲ್ಲಿ ಗೆಲ್ಲಲು ಮುಂದಿನ ಚುನಾವಣೆಯಲ್ಲಿ ನನ್ನನ್ನು ಕಣಕ್ಕಿಳಿಸುವ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com