ಬಿಜೆಪಿ ಆಡಳಿತದಲ್ಲಿ ರೈತರು ಅನಾಥರಾಗಿದ್ದಾರೆ: ಡಿಕೆ ಶಿವಕುಮಾರ್

ಅಕಾಲಿಕ ಮಳೆಯಿಂದ ಅಪಾರ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಕರೆಗೆ ರೂ.10 ಸಾವಿರ ಪರಿಹಾರ ಘೋಷಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ಆಗ್ರಹಿಸಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್
Updated on

ಬೆಂಗಳೂರು: ಅಕಾಲಿಕ ಮಳೆಯಿಂದ ಅಪಾರ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಕರೆಗೆ ರೂ.10 ಸಾವಿರ ಪರಿಹಾರ ಘೋಷಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಸಮಯದಲ್ಲಿ ಸರ್ಕಾರವು ಮಾರುಕಟ್ಟೆ ಅವಕಾಶಗಳನ್ನು ಒದಗಿಸದ ಕಾರಣ ರೈತರು ನಷ್ಟವನ್ನು ಅನುಭವಿಸಿದರು ಮತ್ತು ಕರ್ನಾಟಕದಲ್ಲಿ ಕೃಷಿಕರು ಅನಾಥರಾಗಿದ್ದಾರೆ ಎಂದು ಅವರು ಹೇಳಿದರು.

ಮೂರು ವರ್ಷಗಳಿಂದ ಅತಿವೃಷ್ಟಿ ಇದ್ದರೂ ರೈತರಿಗೆ ಸರ್ಕಾರದಿಂದ ಪರಿಹಾರ ಸಿಕ್ಕಿರುವುದು ತೀರಾ ಕಡಿಮೆ. ಅಕಾಲಿಕ ಮಳೆಯಿಂದ ಕಟಾವು ಮಾಡಿದ ಬೆಳೆ ಅಪಾರ ಹಾನಿಯಾಗಿದ್ದು, ಸಂಕಷ್ಟದಲ್ಲಿರುವ ರೈತರ ತೆರಿಗೆಯನ್ನು ಸರ್ಕಾರ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಕಳೆದ ವರ್ಷ ಘೋಷಣೆ ಮಾಡಿದ ಪರಿಹಾರ ಇನ್ನೂ ಸಿಕ್ಕಿಲ್ಲ. ಫಸಲ್ ಭಿಮಾ ಯೋಜನೆ ಇದ್ದರೂ ರೈತರಿಗೆ ಉಪಯೋಗವಾಗಿಲ್ಲ. ಪರಿಹಾರ ಹಣ 30 ದಿನದೊಳಗೆ ನೀಡಿ. ನೆಪ ಹೇಳಿ ಪರಿಹಾರ ಹಣ ನೀಡದಿರುವುದು, ವಿಳಂಬ ಮಾಡಬಾರದು. ರೈತರು ಯಾರೂ ಸುಳ್ಳು ಅರ್ಜಿಗಳನ್ನು ಹಾಕಲು ಹೋಗಲ್ಲ. ಬೆಳೆ ಹಾನಿ ಫೋಟೋ, ಅರ್ಜಿ ಹಾಕಿದರೆ ಪರಿಹಾರ ನೀಡಿ ಎಂದು ಹೇಳಿದ್ದಾರೆ.

ಬೆಳೆ ನಷ್ಟವನ್ನು ನಿರ್ಣಯಿಸಲು ಮತ್ತು ತ್ವರಿತ ಪರಿಹಾರ ನೀಡಲು ಸರ್ಕಾರವು ಬಳಕೆದಾರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ಹಾನಿಗೊಳಗಾದ ಬೆಳೆಗೆ ಕಂದಾಯ ಅಧಿಕಾರಿಗಳು 30 ದಿನಗಳಲ್ಲಿ ಪರಿಹಾರ ನೀಡಬೇಕು. ರೈತರು ತಮ್ಮ ನ್ಯಾಯಯುತ ಪರಿಹಾರವನ್ನು ಪಡೆಯಲು ಹಾನಿಯಾದ ಬೆಳೆಗಳ ಭಾವಚಿತ್ರಗಳೊಂದಿಗೆ ಮನವಿಗಳನ್ನು ಸಲ್ಲಿಸಲು ಸರ್ಕಾರ ಅನುವು ಮಾಡಿಕೊಡಬೇಕು.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಲಾಕ್‌ಡೌನ್ ಸಮಯದಲ್ಲಿ ರೈತರಿಗೆ ಪರಿಹಾರ ನೀಡಲಿಲ್ಲ. ಈ ಎಲ್ಲಾ ಘೋಷಣೆಗಳು ಕಾಗದದಲ್ಲಿ ಮಾತ್ರ ಉಳಿದಿವೆ. ಮನೆ ಕಳೆದುಕೊಂಡವರಿಗೆ 5 ಲಕ್ಷ ಹಾಗೂ ಭಾಗಶಃ ಹಾನಿಗೊಳಗಾದವರಿಗೆ 1 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿತ್ತು..ಆದರೆ ಇದುವರೆಗೂ ಯಾರೊಬ್ಬರಿಗೂ ಪರಿಹಾರ ಸಿಕ್ಕಿಲ್ಲ. ಕರ್ನಾಟಕದ 25 ಬಿಜೆಪಿ ಸಂಸದರು ಕೇಂದ್ರದಿಂದ ಯಾವುದೇ ಪರಿಹಾರ ಪಡೆಯಲು ಜನರಿಗೆ ಸಹಾಯ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com