ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ: ಸಿದ್ದರಾಮಯ್ಯ ಬಾಂಬ್!

20 ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ನ 25 ಕ್ಷೇತ್ರಗಳಿಗೆ ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಈ ಬೆನ್ನಲ್ಲೇ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಗಳು ತೀವ್ರಗೊಂಡಿವೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: 20 ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ನ 25 ಕ್ಷೇತ್ರಗಳಿಗೆ ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಈ ಬೆನ್ನಲ್ಲೇ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಗಳು ತೀವ್ರಗೊಂಡಿವೆ.

ಈ ಮಧ್ಯೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್ ಮಧ್ಯೆ ಒಳ ಒಪ್ಪಂದವಾಗಿದೆ ಎಂಬ ಗುರುತರ ಆರೋಪವನ್ನು ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ನಾವು ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನಮ್ಮ ಬೆಂಬಲಿತರಿಗೆ, ಪಕ್ಷದ ಅಭ್ಯರ್ಥಿಗೆ ಒಂದು ಮತ ಮಾತ್ರ ಹಾಕಲು ಸೂಚನೆ ಕೊಟ್ಟಿದ್ದೇನೆ. ಆದರೆ ಬೇರೆ ಚುನಾವಣೆಗಳಂತೆ ಈ ಚುನಾವಣೆಯಲ್ಲೂ ಬಿಜೆಪಿ - ಜೆಡಿಎಸ್ ನಡುವೆ ಒಳ ಒಪ್ಪಂದ ನಡೆದಿದೆ” ಅಂತಾ ಟ್ವೀಟ್ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದಾರಮಯ್ಯ ರಾಜಕೀಯ ಸಂಚಲನಕ್ಕೆ ಕಾರಣವಾಗಿದ್ದಾರೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸ್ಥಾನಕ್ಕೆ ನಡೆಯುವ ಈ ಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ರಾಜಕೀಯ ನಾಯಕರು ಹೇಳಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಗುರುತರ ಆರೋಪ ಮುಂದಿನ ದಿನಗಳಲ್ಲಿ ಯಾವ ರೀತಿಯ ಸ್ವರೂಪ ಪಡೆದುಕೊಳ್ಳಲಿದೆ ಅನ್ನೋದನ್ನು ಕಾದು ನೋಡಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com