'ಅಹಿಂದ' ಎಂಬುದು ಸಿದ್ದರಾಮಯ್ಯ ಅವರ ವೋಟ್ ಬ್ಯಾಂಕ್: ನಳಿನ್ ಕುಮಾರ್ ಕಟೀಲ್

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. 
ವಿಜಯಪುರಕ್ಕೆ ಬಂದ ನಳಿನ್ ಕುಮಾರ್ ಕಟೀಲ್ ಅವರನ್ನು ಸ್ವಾಗತಿಸಿದ ಕಾರ್ಯಕರ್ತರು.
ವಿಜಯಪುರಕ್ಕೆ ಬಂದ ನಳಿನ್ ಕುಮಾರ್ ಕಟೀಲ್ ಅವರನ್ನು ಸ್ವಾಗತಿಸಿದ ಕಾರ್ಯಕರ್ತರು.

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. 

ಸೊಲಮಲಾಪುರ ರಸ್ತೆಯ ಬಳಮಕರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಅಹಿಂದ ಎಂಬುದು ಸಿದ್ದರಾಮಯ್ಯ ಅವರ ವೋಟ್ ಬ್ಯಾಂಕ್ ಆಘಿದೆ. ಹಿಂದುಳಿದ ವರ್ಗಗಳ ಹೆಸರು ಹೇಳಿಕೊಂಡು ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಆದರೆ ಅವರ ಕಲ್ಯಾಣಕ್ಕಾಗಿ ಶ್ರಮಿಸಲಿಲ್ಲ. 

ಮಾಜಿ ಸಿಎಂ ಸಿದ್ದರಾಮಯ್ಯನವರು ಅಧಿಕಾರಕ್ಕಾಗಿ ಅಹಿಂದ ಹೋರಾಟ ನಡೆಸಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ, ಬೆಳವಣಿಗೆಗೆ ಅವರು ಹೋರಾಟ ಮಾಡಲಿಲ್ಲ. ಹಿಂದುಳಿದ ವರ್ಗಗಳ ಬಗ್ಗೆ ಕಾಂಗ್ರೆಸ್ಸಿಗೆ ನೈಜ ಕಾಳಜಿ ಇಲ್ಲ. ಹಾಗಾಗಿ ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ ಎಂದು ಟೀಕಿಸಿದರು. 

ಅಹಿಂದ ಹೆಸರಿನಲ್ಲಿ ನಾಯಕರಾಗಿದ್ದವರ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡರು. ರೈತರ ಕುಟುಂಬಗಳಿಗೆ ಕನಿಷ್ಟ ಸಾಂತ್ವನ ಹೇಳಲು ಕೂಡ ಅವರ ಮನೆಗೆ ಹೋಗಲಿಲ್ಲ. ರಾಜ್ಯದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ 20 ಜನರು ಮೃತಪಟ್ಟರೂ ಹಿಂದುಳಿದ ವರ್ಗದ ನಾಯಕರು ಅವರ ಕಣ್ಣೀರು ಒರೆಸಲಿಲ್ಲ ಎಂದು ಆರೋಪಿಸಿದರು. 

ಬಿಜೆಪಿ ಹಿಂದುಳಿದ ಮೋರ್ಚಾ ಪಕ್ಷದ ಅಣತಿಯಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ. ಹಿಂದುಳಿದ ವರ್ಗದ ಪ್ರಧಾನಮಂತ್ರಿ ನರೇಂದ್ರ ಮೋದಿ ಕೈಯಲ್ಲಿ ಬಿಜೆಪಿ ಅಧಿಕಾರ ನೀಡಿದೆ. ಬಿಜೆಪಿ ರಾಜಕೀಯ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿಲ್ಲ. ದೇಶ ಸೇವೆಯಂತಹ ಹತ್ತಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.ಬಿಜೆಪಿ ನಗರಕ್ಕೆ ಸೀಮಿತ ಪಕ್ಷ ಎಂಬ ವಾತಾವರಣ ಇತ್ತು. ಆದದರೆ, ರಾಜ್ಯಾದ್ಯಂತ ಸೇವಾಯಿ ಚಟುವಟಿಕೆಗಳನ್ನು ಕೈಗೊಂಡಿದೆ. 

50,000 ಮತಗಟ್ಟೆಗಳಲ್ಲಿ ಪ್ರಧಾನಿ ಮೋದಿ ಜನ್ಮದಿನ ಆಚರಿಸಲಾಗಿದೆ. ಸ್ವಚ್ಛ ಭಾರತ ಅಭಇಯಾನ, ಸೇವಾಯಿ ಸಮರ್ಪಣಾ ಕಾರ್ಯ ಮಾಡುತ್ತಿದೆ. ಬಿಜೆಪಿಯವರು ರಾಜಕೀಯವನ್ನು ಒಂದು ವ್ರತವನ್ನಾಗಿ ತಿಳಿದುಕೊಂಡಿದೆ ಎಂದರು. 

ಕೇಂದ್ರದಲ್ಲಿ 20 ಜನರ ದಲಿತರು 27 ಜನರನ್ನು ಸಚಿವರನ್ನಾಗಿ ಮಾಡಲಾಗಿದೆ. ಬಿ.ಎಸ್.ಯಡಿಯೂರಪ್ಪ ಅಧಿಕಾರಾವಧಿಯಲ್ಲಿ 13 ಹಿಂದುಳಿದ ವರ್ಗಗಳ ನಿಗಮಗಳನ್ನು ಸ್ಥಾಪಿಸಲಾಗಿದೆ. ಹಿಂದುಳಇದ ವರ್ಗಗಳಇದೆ ಬಿಜೆಪಿ ಹೆಚ್ಚಿನ ಆದ್ಯತೆ ನೀಡಿದೆ. ಬಿಜೆಪಿ ಹಿಂದುಳಿದ ವರ್ಗದವರ ಬಗ್ಗೆ ಬರೀ ಮಾತನಾಡುವುದಿಲ್ಲ, ಕೆಲಸ ಮಾಡುತ್ತಿದೆ. ಬಿಜೆಪಿ ಈಗ ಸರ್ವ ವ್ಯಾಪಿ, ಸರ್ವ ಸ್ಪರ್ಶ ಪಕ್ಷವಾಗಿದೆ ಎಂದು ಹೇಳಿದರು. 

ಬಿಜೆಪಿ ಸರ್ಕಾರ ರೂ.2315 ಕೋಟಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಮೀಸಲಿಟ್ಟಿದೆ. ಹಿಂದುಳಿದ ವರ್ಗಗಳ ಕಲ್ಯಾಣಖ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. 

ಬಳಿಕ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಿಗಿದ್ದಾಗ ಹಿಂದುಳಿದವರ ಜಾತಿ ಗಣತಿ ಮಾಡಲಾಗುತ್ತಿದೆ ಎಂದು ಹೇಳಿಕೊಂಡುಬರುತ್ತಿದ್ದರು. ಆದರೆ, ಅವರು ಇದೂವರೆಗೆ ಜಾತಿ ಗಣತಿ ಮಾಡಿಲ್ಲ. ನಾವು ಜಾತಿ ಜನಗಣತಿ ಬಿಡುಗಡೆ ಮಾಡಿಯೇ ಮಾಡುತ್ತೇವೆ. ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಬಿಡುಗಡೆ ಮಾಡುತ್ತೇನೆಂದು ಸಿದ್ದರಾಮಯ್ಯ ಹೇಳಿದ್ದರು. ಈಗ ವರದಿ ಸಿದ್ಧವಾಗಿದ್ದರೂ ಬಿಡುಗಡೆ ಮಾಡಲಿಲ್ಲವೇಕೆ? ಅದು ಸರಿ ನಿಮ್ಮ ಸಮ್ಮಿಶ್ರ ಸರ್ಕಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮೇಲೆ ಏಕೆ ಒತ್ತಡ ಹಾಕಲಿಲ್ಲ ಎಂದು ಪ್ರಶ್ನಿಸಿದರು. 

ಈಗ ನಾನು ಹೇಳಿದೆ, ಅವರು ಮಾಡಲಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ, ಅವರಿಗೆ ಕೊಟ್ಟ ಬೆಂಬಲ ವಾಪಸ್ ಪಡೆಯಬೇಕಿತ್ತು ಎಂದು ಸಿದ್ದರಾಮಯ್ಯ ಅವರಿಗ ಪ್ರಶ್ನಿಸಿದ ಅವರು, ಅಧಿಕಾರ ಬೇಕು ಎಲ್ಲವೂ ಬೇಕು. ಇಲ್ಲಿ ನಾಟಕ ಮಾಡುತ್ತಿದ್ದಾರೆಂದು ಕಿಡಿಕಾರಿದರು. 

ಬಿಜೆಪಿ ಸರ್ಕಾರ ಬಂದಿದೆ ಘೋಷಣೆ ಮಾಡಲಿ. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುತ್ತೇವೆಂದು ಹೇಳುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಏಕೆ ಮಾಡಲಿಲ್ಲ. ಈಗ ನಮ್ಮ ಮೇಲೆ ಹಾಕುತ್ತಿದ್ದಾರೆ. ಅಧಿವೇಶನದಲ್ಲಿ ಏಕೆ ಹೋರಾಟ ಮಾಡಲಿಲ್ಲ? ಜಾತಿ ಗಣತಿ ಎಂದು ಅಧಿವೇಶನದಲ್ಲಿ ಒಂದು ಪದ ಕೂಡ ಹೇಳಲಿಲ್ಲ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com