ಅಕ್ಟೋಬರ್ 16 ರಿಂದ ಕಂದಾಯ ಸಚಿವರ ಗ್ರಾಮ ವಾಸ್ತವ್ಯಕ್ಕೆ ಸಿಎಂ ಚಾಲನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ್ಯಾಮತಿ ತಾಲೂಕಿನಲ್ಲಿ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 10 ಕೋಟಿ ರು ಅನುದಾನ ನೀಡುವ ಸಂಬಂಧ ಅಕ್ಟೋಬರ್ 16 ರಂದು ಘೋಷಣೆ ಮಾಡುವ ಸಾಧ್ಯತೆಯಿದೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ್ಯಾಮತಿ ತಾಲೂಕಿನಲ್ಲಿ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 10 ಕೋಟಿ ರು ಅನುದಾನ ನೀಡುವ ಸಂಬಂಧ ಅಕ್ಟೋಬರ್ 16 ರಂದು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.

ಗುರುವಾರ ಮಾತನಾಡಿದ ಅವರು, ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಿಗೆ ಸಿಎಂ ಭೇಟಿ ನೀಡುವ ಸಂಬಂಧ ಮಾಹಿತಿ ನೀಡಿದರು. 

ನನ್ನ ಮನವಿಯ ಮೇರೆಗೆ ಕಂದಾಯ ಸಚಿವ ಆರ್. ಅಶೋಕ್ ಅಕ್ಟೋಬರ್ 16ರಂದು ಹೊನ್ನಾಳಿಯಲ್ಲಿ ತಮ್ಮ ಗ್ರಾಮವಾಸ್ತವ್ಯ ಆರಂಭಿಸಲಿದ್ದಾರೆ, ಈ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ನ್ಯಾಮತಿಯಲ್ಲಿರುವ ಸುರುಹೊನ್ನೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಘೋಷಿಸಲಿದ್ದಾರೆ ಎಂದು ಹೇಳಿದರು. ಗ್ರಾಮದಲ್ಲಿ ಬಗೆಹರಿಸಲಾಗದಂತ ಹಲವು ಸಮಸ್ಯೆಗಳಿವೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com