ಮೈಶುಗರ್ ಕಾರ್ಖಾನೆ ಖಾಸಗೀಕರಣ ಬೇಡ, ಪುನಶ್ಚೇತನಗೊಳಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಮೈಶುಗರ್ ಸರ್ಕಾರಿ ಸ್ವಾಮ್ಯದಲ್ಲೇ ಇರಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಪ್ರಾರಂಭವಾದ ಕಾರ್ಖಾನೆ ಇದು. ಕಾರಣಾಂತರಗಳಿಂದ ನಷ್ಟ ಆಗಿರಬಹುದು. ಆದರೆ, ಅದಕ್ಕೆ ರೈತರು ಹೊಣೆ ಅಲ್ಲ.
ಸಿದ್ದರಾಮಯ್ಯ ಪ್ರತಿಭಟನೆಯಲ್ಲಿ ಭಾಗಿ
ಸಿದ್ದರಾಮಯ್ಯ ಪ್ರತಿಭಟನೆಯಲ್ಲಿ ಭಾಗಿ
Updated on

ಮಂಡ್ಯ: ಮೈಶುಗರ್ ಸರ್ಕಾರಿ ಸ್ವಾಮ್ಯದಲ್ಲೇ ಇರಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಪ್ರಾರಂಭವಾದ ಕಾರ್ಖಾನೆ ಇದು. ಕಾರಣಾಂತರಗಳಿಂದ ನಷ್ಟ ಆಗಿರಬಹುದು. ಆದರೆ, ಅದಕ್ಕೆ ರೈತರು ಹೊಣೆ ಅಲ್ಲ. ನಷ್ಟಕ್ಕೆ ಸರ್ಕಾರವೇ ಹೊಣೆ. ಹಾಗೆಂದು ಕಾರ್ಖಾನೆ ಮಾರಿ ಬಿಡಲಾಗದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಡ್ಯದಲ್ಲಿ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿರುವ 65 ಸಕ್ಕರೆ ಕಾರ್ಖಾನೆಗಳ ಪೈಕಿ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆ ಎಂದರೆ ಮೈಶುಗರ್ ಕಾರ್ಖಾನೆ. ಸ್ವಾತಂತ್ರ್ಯ ಪೂರ್ವದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಾರ್ಖಾನೆಯನ್ನು ಸ್ಥಾಪಿಸಿದ್ದರು. ಇದರ ಖಾಸಗೀಕರಣ ಜನದ್ರೋಹ ಎಂದರು.

ಮೈಶುಗರ್ ಕಾರ್ಖಾನೆ ಹಲವು ವರ್ಷಗಳ ಕಾಲ ಲಾಭದಲ್ಲೇ ಇತ್ತು, ಈಗ ನಷ್ಟಕ್ಕೆ ಸಿಲುಕಿದೆ. ಈ ನಷ್ಟಕ್ಕೆ ಸರ್ಕಾರ ಹೊಣೆಯೇ ಹೊರತು ರೈತರಲ್ಲ. ಸರ್ಕಾರದ ಹಲವು ಕಾರ್ಖಾನೆಗಳು, ಸಂಸ್ಥೆಗಳು ನಷ್ಟದಲ್ಲಿವೆ.‌ ಅವುಗಳನೆಲ್ಲ ಮಾರಾಟ ಮಾಡೋಕಾಗುತ್ತಾ? ನಷ್ಟಕ್ಕೆ ಕಾರಣಗಳನ್ನು ಪತ್ತೆಹಚ್ಚಿ, ಪುನರುಜ್ಜೀವನಗೊಳಿಸುವ ಕೆಲಸ ಸರ್ಕಾರ ಮಾಡಬೇಕು.  ವಿಧಾನಸಭೆಯಲ್ಲಿ ಮೈಶುಗರ್ ಕಾರ್ಖಾನೆ ಬಗ್ಗೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ನಷ್ಟಕ್ಕೆ ಕಾರಣಗಳೇನು ಎನ್ನುವುದನ್ನು ವಿವರಿಸಿ, ಸರ್ಕಾರಿ ಸ್ವಾಮ್ಯದಲ್ಲೇ
ಉಳಿಸಿಕೊಳ್ಳುವಂತೆ ಒತ್ತಾಯಿಸಿದ್ದೆ. ಮಂಡ್ಯದ ಖಾಸಗಿ ಸಕ್ಕರೆ ಕಾರ್ಖಾನೆಗಳು ಲಾಭಗಳಿಸುತ್ತವೆ, ಆದರೆ ಸರ್ಕಾರಿ ಕಾರ್ಖಾನೆಗೆ ಏಕೆ ಲಾಭ ಗಳಿಸಲು ಸಾಧ್ಯವಿಲ್ಲ ಎಂಬುದು ನನ್ನ ಪ್ರಶ್ನೆಯಾಗಿದೆ ಎಂದು ಹೇಳಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಕಾರ್ಖಾನೆ ಉಳಿಯಬೇಕು ಎಂಬ ಉದ್ದೇಶದಿಂದ ರೂ. 145 ಕೋಟಿ ಅನುದಾನ ನೀಡಿದ್ದೆ. ಬಿ.ಎಸ್ ಯಡಿಯೂರಪ್ಪ ಅವರು ಮಂಡ್ಯ ಜಿಲ್ಲೆಯವರು, ಅವರು ಈ ಕಾರ್ಖಾನೆಯನ್ನು ಅಭಿವೃದ್ಧಿ ಮಾಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರ ಕಾಲದಲ್ಲೇ ಖಾಸಗೀಕರಣಗೊಳಿಸುವ ಕೆಲಸ ಆರಂಭ ಮಾಡಿದರು. ಕಾರ್ಖಾನೆಗೆ ಸಂಬಂಧಿಸಿದ ಆಸ್ತಿ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ಇದೆ. ರವೀಂದ್ರ ಕಲಾಕ್ಷೇತ್ರದ ಎದುರು ಭಾಗದಲ್ಲಿ ಕಾರ್ಖಾನೆಗೆ ಸೇರಿದ ಭೂಮಿ ಇದೆ. ಈ
ಭೂಮಿಯನ್ನು ಅಭಿವೃದ್ಧಿಪಡಿಸಿ, ಅದರಿಂದ ಬರುವ ಆದಾಯವನ್ನು ಕಾರ್ಖಾನೆಗೆ ಬಳಕೆ ಮಾಡಿಕೊಳ್ಳಬಹುದು ಎಂದು ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರ ಬಳಿ ಕಾರ್ಖಾನೆಯ ಪುನಶ್ಚೇತನಕ್ಕೆ ಅಗತ್ಯವಿರುವ ಅನುದಾನ ನೀಡುವಂತೆ ಮಾತನಾಡುತ್ತೇನೆ. ಒಂದು ವೇಳೆ ಅವರು ಈ ಕೆಲಸ ಮಾಡದಿದ್ದರೆ ಮತ್ತೆ ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳ ಒಳಗಾಗಿ ಕಾರ್ಖಾನೆಯನ್ನು ಪುನರ್ ಆರಂಭಿಸುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com