'ತಕ್ಕಡಿ‌‌ ಮೇಲೆಳುತ್ತಿಲ್ಲ ಎನ್ನುವ ಮೂಲಕ ಕಾಂಗ್ರೆಸ್ಸಿಗೆ ಭವಿಷ್ಯವಿಲ್ಲ ಎಂದು ಪಕ್ಷದ ಮುಖಂಡರೇ ಗುಟ್ಟಾಗಿ ಒಪ್ಪಿಕೊಂಡಿದ್ದಾರೆ'

ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪಕ್ಷದವರೇ ಹೇಳಿರುವ ಮಾತುಗಳನ್ನು ರಾಜ್ಯದ ಜನ ಕೇಳುತ್ತಿದ್ದಾರೆ. ಡಿಕೆಶಿ ಮೇಲೆ ಇಡಿ, ಸಿಬಿಐ ದಾಳಿಯಾದಾಗ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದ ಮುಖಂಡರು ಸಾಕ್ಷ್ಯ ನೀಡಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Updated on: 

ಬೆಂಗಳೂರು: ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪಕ್ಷದವರೇ ಹೇಳಿರುವ ಮಾತುಗಳನ್ನು ರಾಜ್ಯದ ಜನ ಕೇಳುತ್ತಿದ್ದಾರೆ.

ಡಿಕೆಶಿ ಮೇಲೆ ಇಡಿ, ಸಿಬಿಐ ದಾಳಿಯಾದಾಗ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದ ಮುಖಂಡರು ಸಾಕ್ಷ್ಯ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ತಕ್ಕಡಿ‌‌ ಮೇಲೇಳುತ್ತಿಲ್ಲ ಎನ್ನುವ ಮೂಲಕ ಕಾಂಗ್ರೆಸ್ಸಿಗೆ ಭವಿಷ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡರೇ ಗುಟ್ಟಾಗಿ ಒಪ್ಪಿಕೊಂಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ರಾಜ್ಯಾಧ್ಯಕ್ಷರಾಗಿ ಇದ್ದರೆ ಪಕ್ಷ ನಿರ್ನಾಮವಾಗಲಿದೆ ಎಂದು ಕಾಂಗ್ರೆಸ್ಸಿಗರು ಹೇಳಿರುವುದು ತಡವಾಗಿಯಾದರೂ ಜ್ಞಾನೋದಯವಾದಂತಾಗಿದೆ ಎಂದು ಕಟೀಲ್ ವ್ಯಂಗ್ಯ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕುಳಿತು ಸತ್ಯ ಹೇಳಿರುವ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದಗಳು. ನಿಮ್ಮ ಮಾತುಗಳನ್ನು ಜನರಿಗೆ ತಲುಪಿಸಿರುವ ಮಾಧ್ಯಮಗಳಿಗೆ ಅಭಿನಂದನೆ ಎಂದು ಕಟೀಲ್ ಟ್ವೀಟ್ ಮಾಡಿದ್ಧಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com