ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ

ತ್ರಿಶೂಲ ದೀಕ್ಷೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ ಎಂದು ಕಿಡಿ ಕಾರಿದ್ದಾರೆ
ವಿಜಯಪುರ ಪೊಲೀಸ್ ಸಿಬ್ಬಂದಿ
ವಿಜಯಪುರ ಪೊಲೀಸ್ ಸಿಬ್ಬಂದಿ
Updated on

ಬೆಂಗಳೂರು: ತ್ರಿಶೂಲ ದೀಕ್ಷೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ ಎಂದು ಕಿಡಿ ಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ  ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ,  ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ ಇದಕ್ಕೆಲ್ಲ  ಕರ್ನಾಟಕ ಸಿಎಂ ಬಹಿರಂಗ ಬೆಂಬಲ ರಾಜ್ಯದಲ್ಲಿ ಸರ್ಕಾರ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಗಳೇ ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಗೂಂಡಾಗಿರಿಯನ್ನು 'ಕ್ರಿಯೆಗೆ ಪ್ರತಿಕ್ರಿಯೆ' ಎಂದು ಸಮರ್ಥಿಸಿದ ಮುಖ್ಯಮಂತ್ರಿಗಳ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ  ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ ಎಂದಿದ್ದಾರೆ.

ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ್  ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ, ಬಸವರಾಜ ಬೊಮ್ಮಾಯಿ  ಅವರೇ, ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ ಎಂದು ಟಾಂಗ್ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com