ರಾಹುಲ್ ಗಾಂಧಿ ಬಗ್ಗೆ ನಳೀನ್ ಕಟೀಲ್ ಹೇಳಿಕೆ ಸಮರ್ಥನಿಯವಲ್ಲ: ಬಿ.ಎಸ್. ಯಡಿಯೂರಪ್ಪ ಬೇಸರ

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಕುರಿತಂತೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ನೀಡಿರುವ ಹೇಳಿಕೆ ಸಮರ್ಥನಿಯವಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ನಳಿನ್ ಕುಮಾರ್ ಕಟೀಲ್ ಮತ್ತು ಯಡಿಯೂರಪ್ಪ
ನಳಿನ್ ಕುಮಾರ್ ಕಟೀಲ್ ಮತ್ತು ಯಡಿಯೂರಪ್ಪ

ಸಿಂಧಗಿ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಕುರಿತಂತೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ನೀಡಿರುವ ಹೇಳಿಕೆ ಸಮರ್ಥನಿಯವಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಸಿಂಧಗಿ ತಾಲ್ಲೂಕು ಮೊರಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಟೀಲ್ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂದಿರುವುದು ಸೂಕ್ತವಲ್ಲ. ಈ ರೀತಿ ಅಗೌರವದಿಂದ ಮಾತನಾಡಿರುವುದು ಸಮರ್ಥನಿಯವಲ್ಲ ಎಂದರು.

ಯಾರ ಬಗ್ಗೆಯೂ ಅವಹೇಳಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದ ಅವರು ರಾಹುಲ್ ಗಾಂಧಿ ಬಗ್ಗೆ ತಮಗೆ ಗೌರವವಿದೆ ಎಂದು ಹೇಳೀದರು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು  ಅನಗತ್ಯವಾಗಿ ಆರ್.ಎಸ್.ಎಸ್. ಎಳೆದು ತರುವುದರಿಂದ ಅವರಿಗೆ ಯಾವುದೇ ಲಾಭವಾಗುವುದಿಲ್ಲ ಎಂದು ಹೇಳಿದರು.

ನಿನ್ನೆ ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ನಳಿನ್ ಕುಮಾರ್ ಕಟೀಲ್, ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ ಹಾಗೂ ಡ್ರಗ್ ಪೆಡ್ಲರ್. ಅವರು ಹೇಗೆ ದೇಶವನ್ನು ಮುನ್ನಡೆಸುತ್ತಾರೆ?" ಎಂದು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ನಾಯಕತ್ವ ರಹಿತವಾಗಿದೆ ಮತ್ತು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನಡುವೆ ತೀವ್ರ ಸ್ಪರ್ಧೆ ಇತ್ತು. ಪಕ್ಷವನ್ನು ನಡೆಸಲು ಸಾಧ್ಯವಾಗದ ಈ ವ್ಯಕ್ತಿಗಳು ದೇಶವನ್ನು ಹೇಗೆ ನಡೆಸುತ್ತಾರೆ ಎಂದು ಪ್ರಶ್ನಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com