ಹಾನಗಲ್: ಕಾಂಗ್ರೆಸ್ ನಾಯಕರು ವಾಸ್ತವತೆಯನ್ನು ಅರ್ಥ ಮಾಡಿಕೊಳ್ಳದೆ ವಾದ ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಆದರೆ ನಾವು ವಾದ ಮಾಡದೆ ಜನರ ಮನಸ್ಸನ್ನು ಗೆಲ್ಲುವ ಮೂಲಕ ಉಪ ಚುನಾವಣೆಯನ್ಮು ಗೆಲ್ಲುತ್ತೇವೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ಮುಖಂಡರು ಚುನಾವಣಾ ಪ್ರಚಾರದಲ್ಲಿ ನಡೆಸುತ್ತಿರುವ ವಾಕ್ಸಮರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ವಾದವನ್ನು ಮಾಡದೆ ಜನರ ಮನಸ್ಸನ್ನು ಗೆಲ್ಲುವ ಪ್ರಯತ್ನ ಮಾಡುತ್ತಿದ್ದೇವೆ. ಹಾನಗಲ್ ಹಾಗೂ ಸಿಂದಗಿಯಲ್ಲಿ ಜನರ ಪ್ರೀತಿ ವಿಶ್ವಾಸ ಹಾಗೂ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ನಾವು ಚುನಾವಣೆ ಎದುರಿಸುತ್ತಿದ್ದೇವೆ. ಅದೇ ನಮಗೆ ಶಕ್ತಿ ಎಂದರು.
ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಉತ್ತರ ಕರ್ನಾಟಕದ ಬಗ್ಗೆ ಇರದ ಕಾಳಜಿ ಈಗ ತೋರಿಸುತ್ತಿದ್ದಾರೆ. ಇವರ ಬಣ್ಣದ ಮಾತುಗಳಿಗೆ ಜನ ಮರುಳಾಗಬಾರದೆಂದು ತಿರ್ಮಾನ ಮಾಡಿದ್ದಾರೆ. ವಾಸ್ತವತೆಯನ್ನು ಕಾಂಗ್ರೆಸ್ ಅರ್ಥಮಾಡಿಕೊಳ್ಳದೆ ವ್ಯರ್ಥವಾಗಿ ವಾದ ಮಾಡುತ್ತಿದೆ ಎಂದರು.
ಉಪಚುನಾವಣೆಗೋಸ್ಕರ ಬಿಜೆಪಿ ಬಹಳಷ್ಟು ಹಣವನ್ನು ಖರ್ಚು ಮಾಡುತ್ತಿದೆ. ಇನ್ನು ಪ್ರತಿ ಓಟಿಗೆ 2,000 ರೂಪಾಯಿಗಳನ್ನು ನೀಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದರು.
Advertisement