'ನೀವು ಘೋಷಣೆ ಮಾಡಿದ 15 ಲಕ್ಷ ಮನೆ ಎಲ್ಲಿದೆ? ಭೂಮಿಯ ಮೇಲಿದೆಯೋ, ಮಂಗಳ ಗ್ರಹದಲ್ಲಿದೆಯೋ?

ತಮ್ಮ ಅಧಿಕಾರವದಿಯಲ್ಲಿ ಜನತೆಗೆ 15 ಲಕ್ಷ ಮನೆ ಮಂಜೂರು ಮಾಡಿದ್ದಾಗಿ ಹೇಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತ ಪಡಿಸಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ತಮ್ಮ ಅಧಿಕಾರವದಿಯಲ್ಲಿ ಜನತೆಗೆ 15 ಲಕ್ಷ ಮನೆ ಮಂಜೂರು ಮಾಡಿದ್ದಾಗಿ ಹೇಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತ ಪಡಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಅಧಿಕಾರಾವಧಿಯ ಕೊನೆಯಲ್ಲಿ "ಮುಖ್ಯಮಂತ್ರಿ 1 ಲಕ್ಷ ಮನೆ" ಯೋಜನೆಯನ್ನು ಬೆಂಗಳೂರು ನಗರದ ಬಡವರಿಗೆ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು.

ಆದರೆ ಬಜೆಟ್‌ನಲ್ಲಿ ಸೂಕ್ತ ಅನುದಾನ ಕಾಯ್ದಿರಿಸಲಿಲ್ಲ. ಮನೆಕಟ್ಟುವುದಕ್ಕೆ ಆಯ್ದುಕೊಂಡ ಜಾಗವೇ ವಿವಾದಗ್ರಸ್ಥವಾಗಿತ್ತು. ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ಅವರಿಗೆ ಪಿಎಚ್‌ಡಿ ನೀಡಬಹುದು ಎಂದು ಲೇವಡಿ ಮಾಡಿದೆ.

ಇನ್ನೆಷ್ಟು ದಿನ ಸಂತೆ ಭಾಷಣ ಹೊಡೆಯುತ್ತೀರಿ  ಬುರುಡೆರಾಮಯ್ಯ, ನೀವು ಘೋಷಣೆ ಮಾಡಿದ 15 ಲಕ್ಷ ಮನೆ ಎಲ್ಲಿದೆ? ಭೂಮಿಯ ಮೇಲಿದೆಯೋ, ಮಂಗಳ ಗ್ರಹದಲ್ಲಿದೆಯೋ? ಕೇವಲ ಘೋಷಣೆ ಮಾಡಿದ ಮಾತ್ರಕ್ಕೆ ಮನೆ ನಿರ್ಮಾಣವಾಗುತ್ತದೆಯೇ? ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೇ? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com