ಜೆಡಿಎಸ್ ಶಾಸಕ ಮಂಜುನಾಥ್‌ ಬಂಧನ: ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದ ಮನೆಗಳನ್ನು ನೆಲಸಮ ಮಾಡುವುದನ್ನು ತಡೆಯಲು ಹೋಗಿದ್ದ ಜೆಡಿಎಸ್ ಶಾಸಕ ಮಂಜುನಾಥ್‌ ಅವರನ್ನು ಬಂಧಿಸಿರುವುದನ್ನು...
ಕುಮಾರಸ್ವಾಮಿ
ಕುಮಾರಸ್ವಾಮಿ

ಹಾಸನ: ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದ ಮನೆಗಳನ್ನು ನೆಲಸಮ ಮಾಡುವುದನ್ನು ತಡೆಯಲು ಹೋಗಿದ್ದ ಜೆಡಿಎಸ್ ಶಾಸಕ ಮಂಜುನಾಥ್‌ ಅವರನ್ನು ಬಂಧಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಡಾವಣೆಯ ಜನರ ಸಂಕಷ್ಟಕ್ಕೆ ಸಂಬಂಧಿಸಿ ಹೋರಾಟಗಾರರು, ಸ್ಥಳೀಯ ನಿವಾಸಿಗಳನ್ನು ಒಳಗೊಂಡಂತೆ ಒಂದು ಸಭೆ ಕರೆದು ಪರಿಹಾರ ಬದಲಿಗೆ ಏಕಾಎಕಿ ಮನೆಗಳನ್ನು ನೆಲಸ ಮಾಡಿ ಕಟುಕರ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನ ಸಾಲ ಮಾಡಿ ಮನೆಗಳನ್ನು ಕಟ್ಟಿದ್ದಾರೆ. ನ್ಯಾಯಾಲಯದಲ್ಲಿ ಸರಿಯಾಗಿ ವಾದ ಮಂಡನೆ ಮಾಡದೇ, ಸಮರ್ಪಕ ಮಾಹಿತಿಯನ್ನೂ ನೀಡದೇ ಅಧಿಕಾರಿಗಳು ಮತ್ತು ಸರಕಾರ ಅಮಾಯಕರ ಜೀವನದ ಜತೆ ಚೆಲ್ಲಾಟ ಆಡಿದ್ದಾರೆ. ಬಿಡಿಎಯ ಈಗಿನ ಅಧ್ಯಕ್ಷ ಎಸ್.‌ಆರ್.‌ವಿಶ್ವನಾಥ್‌ ಅವರೇ ಹಿಂದೆ ಜನರ ಜನರ ಪರ ಹೋರಾಟ ಮಾಡಿ, ಈಗ ನೋಡಿದರೆ ಅವರೇ ನಿಂತು ಮನೆಗಳನ್ನು ನೆಲಸಮ ಮಾಡಿಸುತ್ತಿದ್ದಾರೆ ಎಂದು ಹೆಚ್‌ಡಿಕೆ ಆಕ್ರೋಶ ಹೊರಹಾಕಿದರು.

ಇವರೇ ಒಂದು ಕಡೆ ದುಡ್ಡು ಹೊಡೆಯುವುದು ಇನ್ನೊಂದು ಕಡೆ ಇವರೇ ಮನೆಗಳನ್ನು ಒಡೆಸಿ ಈಗ ಜನರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಮುಖ್ಯಮಂತ್ರಿಗೆ ಜವಾಬ್ದಾರಿ ಎನ್ನುವುದು ಇದ್ದಿದ್ದರೆ ಪರಸ್ಪರ ಕುಳಿತು ಚರ್ಚೆ ಮಾಡಿ, ಕಾನೂನು ರೀತಿಯಲ್ಲಿ ಜನರಿಗೆ ರಕ್ಷಣೆ ನೀಡಬೇಕಾಗಿತ್ತು ಎಂದರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com