ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುಂದು, ಕಲಬುರಗಿಯಲ್ಲಿ ಕೈ ಕೊಂಚ ಮುಂದೆ!

ಹುಬ್ಬಳ್ಳಿ ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ಬೆಳಗಾವಿಯ 58 ವಾರ್ಡ್ ಗಳಲ್ಲಿ ಈಗಾಗಲೇ 20 ವಾರ್ಡ್ ಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಬೆಂಗಳೂರು: ರಾಜ್ಯದ ಮೂರು ಮುಖ್ಯ ಪಾಲಿಕೆ ಚುನಾವಣಾ ಫಲಿತಾಂಶ ಪ್ರಗತಿಯಲ್ಲಿದೆ. ಬೆಂಗಳೂರು ಮಹಾನಗರ ಪಾಲಿಕೆ ನಂತರ ಅತಿದೊಡ್ಡ ಮಹಾನಗರ ಪಾಲಿಕೆಯಾದ ಹುಬ್ಬಳ್ಳಿ ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ಬೆಳಗಾವಿಯ 58 ವಾರ್ಡ್ ಗಳಲ್ಲಿ ಈಗಾಗಲೇ 20 ವಾರ್ಡ್ ಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬೆಳಗಾವಿ ಪಾಲಿಕೆ ಬಹುತೇಕ ಬಿಜೆಪಿಗೆ ಒಲಿಯುವ ಸಾಧ್ಯತೆಯಿದೆ.

ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಗೆಲುವು ಬಹುತೇಕ ಎಂದು ಹೇಳಲಾಗುತ್ತಿದೆ. ಹುಬ್ಬಳ್ಳಿ ಧಾರವಾಡದಲ್ಲಿ ಬಿಜೆಪಿ ಇದುವರೆಗೆ 23 ವಾರ್ಡ್ ಗಳಲ್ಲಿ, ಕಾಂಗ್ರೆಸ್ 13 ಗೆದ್ದರೆ ಜೆಡಿಎಸ್ 0 ಮತ್ತು ಪಕ್ಷೇತರ -3 ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ. ಬೆಳಗಾವಿಯಲ್ಲಿ ಬಿಜೆಪಿಗೆ 24, ಕಾಂಗ್ರೆಸ್ 6, ಜೆಡಿಎಸ್  0ಮತ್ತು ಪಕ್ಷೇತರ 8 ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ.  

ಮತ್ತು ಕಲಬುರಗಿಯಲ್ಲಿ ಬಿಜೆಪಿ--7--, ಕಾಂಗ್ರೆಸ್----9-----, ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿ 1 ಗೆಲುವು ಸಾಧಿಸಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಸ್ಪಷ್ಟ ಚಿತ್ರಣ ಹೊರಬರಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com