ಬಿಬಿಎಂಪಿ ಚುನಾವಣೆಗೆ ಸದ್ದಿಲ್ಲದೇ ಸಜ್ಜಾಗುತ್ತಿವೆ ರಾಜಕೀಯ ಪಕ್ಷಗಳು!

ಈ ವರ್ಷದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ, ಹಾಗಿದ್ದರೂ ರಾಜಕೀಯ ಪಕ್ಷಗಳು ಚುನಾವಣೆಗೆ ಸಿದ್ಧತೆ ಆರಂಭಿಸಿವೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಈ ವರ್ಷದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ, ಹಾಗಿದ್ದರೂ ರಾಜಕೀಯ ಪಕ್ಷಗಳು ಚುನಾವಣೆಗೆ ಸಿದ್ಧತೆ ಆರಂಭಿಸಿವೆ. 

ಮೋದಿ ಬ್ರಾಂಡ್ ಮೇಲೆ ಬಿಜೆಪಿ ತಂತ್ರಗಾರಿಕೆ ರೂಪಿಸಲು ತಯಾರಾಗುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ತಳಮಟ್ಟದ ನಾಯಕರ ಜೊತೆ ಸಂಪರ್ಕ ಸಾಧಿಸಲು ಯತ್ನಿಸುತ್ತಿದೆ.

ನಿಗಮ ಚುನಾವಣೆ ಸೇರಿದಂತೆ ಹಲವು ಚುನಾವಣೆಗಳಿಗೆ ಬ್ರಾಂಡ್ ಮೋದಿಯಾಗಿದ್ದಾರೆ. ಇಲ್ಲಿಯವರೆಗೆ, ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಎಂಬುದರ ಕುರಿತು ಏನನ್ನೂ ನಿರ್ಧರಿಸಲಾಗಿಲ್ಲ, ಆದರೆ ಈ ಚುನಾವಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್ ಅಶೋಕ ನೇತೃತ್ವದಲ್ಲಿ ನಡೆಯಲಿದೆ.

ಇದರ ನಡುವೆ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದೆ. ಮಾಜಿ ಕಾರ್ಪೊರೇಟರ್‌ಗಳು ಮತ್ತು ಶಾಸಕರನ್ನು ಜನಸಾಮಾನ್ಯರೊಂದಿಗೆ ಬೆರೆಯಲು ಅಭಯ ಹಸ್ತ ಯೋಜನೆಯನ್ನು ಜಾರಿಗೊಳಿಸಲು ನಿರ್ದರಿಸಿದ್ದಾರೆ. ಇದರ ಅಡಿಯಲ್ಲಿ ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ, ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಪಡಿತರ, ಔಷಧಗಳು ಮತ್ತು ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ.

ತಳ ಮಟ್ಟದಲ್ಲಿ ಕಾರ್ಯಕರ್ತರನ್ನು ತಲುಪುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಉತ್ತಮವಾಗಿ ಪ್ರದರ್ಶನ ನೀಡದವರನ್ನು ಮುಂಬರುವ ಚುನಾವಣೆಯಲ್ಲಿ ಕೈ ಬಿಡಲಾಗುವುದು ಎಂಬ ಎಚ್ಚರಿಕೆ ನೀಡಲಾಗಿದೆ. ಆದರೆ ವಿಷಯ ಇನ್ನೂ ಕೋರ್ಟ್ ನಲ್ಲಿರುವ ಕಾರಣ ಕಾಂಗ್ರೆಸ್ ಪಕ್ಷವು ತಳ ಮಟ್ಟದಲ್ಲಿ ಸಮರ್ಥಗೊಳಿಸುವ ಕೆಲಸ ಆರಂಭಿಸಲಾಗಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಜನತಾ ದಳ ಮಾಜಿ ಕಾರ್ಪೋರೇಟರ್ ಗಳು ಕಾದು ನೋಡುವ ತಂತ್ರಕ್ಕೆ ಶರಣಾಗಿದ್ದಾರೆ. ಬೆಂಗಳೂರು ನವ ನಿರ್ಮಾಣ ಮತ್ತು ಎಎಪಿ ಪಕ್ಷಗಳು ನಗರದ ಸಮಸ್ಯೆಗಳನ್ನು ನಾಗರಿಕರ ಬಳಿ ತೆಗೆದುಕೊಂಡು ಹೋಗಿ ಜನಪ್ರಿಯತೆ ಪಡೆಯಲು ನಿರ್ಧರಿಸಿವೆ. ನಾವು ಬೆಂಗಳೂರಿನಲ್ಲಿ 12 ಕ್ಷೇತ್ರಗಳನ್ನು ಹೊಂದಿದ್ದೇವೆ ಮತ್ತು ಈ ಸ್ಥಾನಗಳನ್ನು ಕಳೆದುಕೊಳ್ಳದಂತೆ ಕೆಲಸ ಮಾಡುತ್ತಿದ್ದೇವೆ. ಜೆಡಿಎಸ್ ಅಥವಾ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಇನ್ನೂ ಏನನ್ನೂ ನಿರ್ಧರಿಸಲಾಗಿಲ್ಲ ಎಂದು ಕಾಂಗ್ರೆಸ್ ಮಾಜಿ ಕಾರ್ಪೋರೇಟರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com