ಬೆಳಗಾವಿ: ಮಾಜಿ ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಯಾರು ಹಣ ನೀಡಲು ಹೋಗಿದ್ದರು..? ಯಾರು ಆಮಿಷ ಒಡ್ಡಿದ್ದರು ಎಂಬುದನ್ನು ಪರಿಶೀಲನೆ ಮಾಡಬೇಕು ಎಂದು ಮಾಜಿ ಉಪ ಮುಖಮಂತ್ರಿ ಲಕ್ಷ್ಮಣ ಸವದಿ ಅವರು ಭಾನುವಾರ ಹೇಳಿದ್ದಾರೆ.
ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶ್ರೀಮಂತ ಪಾಟೀಲ್ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ನನಗೂ ಅವರಿಗೂ ಭೇಟಿ ಆಗಿಲ್ಲ. ಅವರಿಗೆ ಯಾರು ಹಣ ಕೊಡಲು ಹೋಗಿದ್ದರು? ಯಾರು ಆಮಿಷ ಒಡ್ಡಿದ್ದರು ಎಂಬುವುದು ಪರಿಶೀಲನೆ ಆಗಬೇಕು ಎಂದು ಹೇಳಿದರು.
ಅಧಿಕಾರ ಶಾಶ್ವತವಲ್ಲ. ಅಧಿಕಾರದಲ್ಲಿ ಇದ್ದಾಗ ಮತ್ತು ಅವಕಾಶ ಕೊಟ್ಟಾಗ ಸದ್ಬಳಕೆ ಮಾಡಿಕೊಳ್ಳಬೇಕು. ಶ್ರೀಮಂತ ಪಾಟೀಲ್ ವೈಮನಸ್ಸಿನಿಂದ ಹಾಗೆ ಹೇಳಿದ್ದಾರೆ ಎಂದು ಅನ್ನಿಸುವುದಿಲ್ಲ. ಮಾತನಾಡುವ ಭರದಲ್ಲಿ ಆ ರೀತಿ ಹೇಳಿರಬಹುದು. ಈ ಬಗ್ಗೆ ಅವರನ್ನು ಖುದ್ದು ಭೇಟಿಯಾಗಿ ಮಾತನಾಡುವೆ ಎಂದು ತಿಳಿಸಿದರು.
Advertisement