ಆಸ್ಕರ್ ಫರ್ನಾಂಡಿಸ್ ಸಜ್ಜನ ರಾಜಕಾರಣಿ: ಸಿಎಂ ಬೊಮ್ಮಾಯಿ ಸಂತಾಪ; ಉಡುಪಿಗೆ ಮೃತದೇಹ ರವಾನೆ

ಕೇಂದ್ರ ಸರ್ಕಾರದ ಮಾಜಿ ಸಚಿವ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದು ಅವರ ಬಗ್ಗೆ ಉತ್ತಮ ಮಾತುಗಳನ್ನಾಡಿದ್ದಾರೆ.
ಉಡುಪಿಯ ಚರ್ಚ್ ನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಮೃತದೇಹ
ಉಡುಪಿಯ ಚರ್ಚ್ ನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಮೃತದೇಹ
Updated on

ಬೆಂಗಳೂರು: ಕೇಂದ್ರ ಸರ್ಕಾರದ ಮಾಜಿ ಸಚಿವ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದು ಅವರ ಬಗ್ಗೆ ಉತ್ತಮ ಮಾತುಗಳನ್ನಾಡಿದ್ದಾರೆ.

ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಆಶ್ಕರ್ ಫರ್ನಾಂಡಿಸ್ ಶ್ರಮಜೀವಿಯಾಗಿದ್ದರು. ಕಲೆ, ಸಂಗೀತ ಪ್ರೇಮಿಯಾಗಿದ್ದ ಅವರು ಸ್ವತಃ ಮೌತ್ ಆರ್ಗನ್ ನುಡಿಸುತ್ತಿದ್ದರು. ರಾಜಕೀಯದಲ್ಲಿ ಆಜಾತ ಶತ್ರುವಾಗಿದ್ದರು, ಅವರನ್ನು ಕಳೆದುಕೊಂಡು ಬಹಳ ದುಃಖತಪ್ತರಾಗಿದ್ದೇವೆ ಎಂದು ಕಂಬನಿ ಮಿಡಿದಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಅವರು ಸಾಮಾನ್ಯ ಕುಟುಂಬದಿಂದ ಬಂದವರು, ಅವರ ಸೇವೆ ಮತ್ತು ನಿಷ್ಠೆಯಿಂದ ಈ ಮಟ್ಟಕ್ಕೆ ಬೆಳೆದವರು, ಕೇಂದ್ರ ಸಚಿವರಾಗಿ ಕರ್ನಾಟಕಕ್ಕೆ, ಕನ್ನಡಕ್ಕೆ ಸಾಕಷ್ಟು ಕೆಲಸ ಮಾಡಿದ್ದರು, ಮೃದು ಸ್ವಭಾವವನ್ನು ಹೊಂದಿದ್ದ ಅವರು ಸಜ್ಜನ, ಜನಪರ ರಾಜಕಾರಣಿ ಎಂದು ಶ್ಲಾಘಿಸಿದರು.

ಆಸ್ಕರ್ ಫರ್ನಾಂಡಿಸ್ ಅವರ ಮೃತದೇಹವನ್ನು ಇಂದು ಬೆಳಗ್ಗೆ ಮಂಗಳೂರಿನಿಂದ ಉಡುಪಿಗೆ ಕೊಂಡೊಯ್ಯಲಾಗಿದ್ದು, ಅಲ್ಲಿನ ಮದರ್ ಆಫ್ ಸೊರೊಸ್ ಚರ್ಚ್ ನಲ್ಲಿ ಕಾಂಗ್ರೆಸ್ ನಾಯಕರು ಅಂತಿಮ ದರ್ಶನ ಪಡೆದರು. ಚರ್ಚ್ ನಲ್ಲಿ ನಂತರ ಸಾರ್ವಜನಿಕ ಪ್ರಾರ್ಥನೆ ನಡೆಯಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com