ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜಕೀಯ
ರಾಜ್ಯಾದ್ಯಂತ ದೇಗುಲ ತೆರವು ವಿಚಾರ, ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ದೇಗುಲ ತೆರವು ಕಾರ್ಯಾಚರಣೆ ವಿವಾದದಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ದಾವಣಗೆರೆ: ದೇಗುಲ ತೆರವು ಕಾರ್ಯಾಚರಣೆ ವಿವಾದದಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ. ರಾಜ್ಯಾದ್ಯಂತ ದೇಗುಲ ತೆರವು ವಿಚಾರದಲ್ಲಿ ಸುಪ್ರೀಂ ಕೋರ್ಟ್ ವಿಚಾರ ಸರಿಯಿಲ್ಲ ಎಂದು ನಮಗೆ ಅನಿಸುತ್ತಿದೆ. ಈ ವಿಚಾರದಲ್ಲಿ ಸಾಕಷ್ಟು ಗೊಂದಲ ಕೂಡ ಇದೆ. ದೇಗುಲ ತೆರವು ಸಂಬಂಧ ಸಾರ್ವಜನಿಕರಲ್ಲಿ ಕೂಡ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಹೀಗಾಗಿ ಆದೇಶ ಮರುಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಕೂಡ ದೇಗುಲ ತೆರವು ವಿಚಾರದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ