ಮುಂದಿನ ಚುನಾವಣೆ ಸಿಎಂ ಬೊಮ್ಮಾಯಿ ಹಾಗೂ ನಳಿನ್ ಕುಮಾರ್ ಕಟೀಲ್ ನಾಯಕತ್ವದಲ್ಲಿ ಎದುರಿಸುತ್ತೇವೆ: ಕೆ ಎಸ್ ಈಶ್ವರಪ್ಪ
ದಾವಣಗೆರೆ: ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಶಕ್ತಿಗೊಳಿಸಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಯಾವ ರೀತಿ ಗೆಲ್ಲಬೇಕು ಎಂಬ ರೂಪುರೇಷೆಗಳ ಕುರಿತು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಗಳಾಗುತ್ತವೆ. 2023ನೇ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಘಟನೆ ಶಕ್ತಿಯಿಂದ ಪೂರ್ಣ ಬಹುಮತ ಪಡೆಯುವ ನಿಟ್ಟಿನಲ್ಲಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಘಟನೆ ಮಾಡುವುದು ಪಕ್ಷದ ಗುರಿಯಾಗಿದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾರ್ಯಕಾರಿಣಿ ಸಭೆ ಇಡೀ ರಾಜ್ಯದ ಪಕ್ಷದ ಕಾರ್ಯಕರ್ತರಿಗೆ ಸ್ಪೂರ್ತಿ ನೀಡುತ್ತದೆ ಎಂಬ ವಿಶ್ವಾಸವಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತ ಪಡೆಯಲು ಭಾರತೀಯ ಜನತಾ ಪಾರ್ಟಿ ಪ್ರಯತ್ನ ಪಡುತ್ತದೆ ಎಂದರು.
ಕೇಂದ್ರದ ನಾಯಕರು ಹೇಳಿದಂತೆ ಮುಂದಿನ ಚುನಾವಣೆ ಬಸವರಾಜ ಬೊಮ್ಮಾಯಿ ಮತ್ತು ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿದ್ದು ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಅಲ್ಲ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ