ಸಿದ್ದರಾಮಯ್ಯ
ಸಿದ್ದರಾಮಯ್ಯ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೇ ಸಿಎಂ: ಸಿದ್ದರಾಮಯ್ಯ

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರ ಬಂದರೆ ಮರಳಿ ನಾನೇ ಮುಖ್ಯಮಂತ್ರಿಯಾಗಿ ಬಡವರಿಗೆ ಆಸರೆಯಾಗಿ, ಉತ್ತಮ ಆಡಳಿತ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Published on

ಬಾಗಲಕೋಟೆ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರ ಬಂದರೆ ಮರಳಿ ನಾನೇ ಮುಖ್ಯಮಂತ್ರಿಯಾಗಿ ಬಡವರಿಗೆ ಆಸರೆಯಾಗಿ, ಉತ್ತಮ ಆಡಳಿತ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಮೂಲಕ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಯಾಗಲು ಬಯಸುತ್ತಿರುವ ಇತರೆ ನಾಯಕರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಜಕನೂರು ಗ್ರಾಮದಲ್ಲಿ ನಡೆದ ಸಿದ್ದಶ್ರೀ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಹಿಂದಿನ ಅಧಿಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆ  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತೆ ಮುಂದುವರೆಯಲಿದೆ. ಯಾರು ಕೂಡ ಸಮಾಜದಲ್ಲಿ ಹಸಿವಿನಿಂದ ಬಳಲಬಾರದು ಎಂಬ ನಿರ್ಧಾರ ಮಾಡಿ, ಪ್ರತಿಯೊಬ್ಬರಿಗೂ ಅನ್ನ ಸಿಗುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ ಆದರೂ ಯೋಜನೆ ವಿರುದ್ಧ ಹಲವರು ಕುಹಕ, ಮತ್ತು ವ್ಯಂಗ್ಯವಾಗಿ ಮಾತನಾಡಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com