ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಗೌಡ ರಾಜೀನಾಮೆ: ಯಡಿಯೂರಪ್ಪ ಬೆಂಬಲಿಗರ ನಿಯಂತ್ರಣ?

ಮಾಜಿ ಶಾಸಕ, ಬಿಜೆಪಿ ನಾಯಕ ಬಿ. ಸುರೇಶ್ ಗೌಡ ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.
ಸುರೇಶ್ ಗೌಡ
ಸುರೇಶ್ ಗೌಡ

ತುಮಕೂರು: ಮಾಜಿ ಶಾಸಕ, ಬಿಜೆಪಿ ನಾಯಕ ಬಿ. ಸುರೇಶ್ ಗೌಡ ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.

ಜನರು ತೋರಿಸಿದ ಪ್ರೀತಿ, ಕೊಟ್ಟ ಸಹಕಾರಕ್ಕೆ ಧನ್ಯವಾದ ಸಲ್ಲಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. 'ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ. ಜಿಲ್ಲೆಯ ಜನರ ಸಹಕಾರಕ್ಕೆ ಧನ್ಯವಾದ ಪಕ್ಷದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದು, ಜಿಲ್ಲೆಯ ಜನರು ತೋರಿಸಿದ ಪ್ರೀತಿ, ಬೆಂಬಲಕ್ಕೆ ಅಭಾರಿಯಾಗಿದ್ದೇನೆ' ಎಂದು ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ನಂತರ ಅವರ ಬೆಂಬಲಿಗರನ್ನು ನಿಯಂತ್ರಿಸುವ ಕೆಲಸಕ್ಕೆ ಬಿಜೆಪಿ ವರಿಷ್ಠರು ಮುಂದಾಗಿದ್ದು, ಅದಕ್ಕೆ ತುಮಕೂರಿನಂದಲೇ ಆರಂಭ ಸಿಕ್ಕಿದೆ ಎನ್ನಲಾಗುತ್ತಿದೆ.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬಿ. ಸುರೇಶ್‌ಗೌಡ ರಾಜೀನಾಮೆ ಸಲ್ಲಿಸಿದ್ದು, ಈ ಪ್ರಯತ್ನ ಇತರೆಡೆಗಳಿಗೂ ಕಾಲಿಡಲಿದೆ.

ಯಡಿಯೂರಪ್ಪ ಅವರನ್ನು ಬದಲಿಸಿದ ನಂತರ ಅವರ ಬೆಂಬಲಿಗರನ್ನು ನಿಧಾನವಾಗಿ ಕೆಳಗಿಳಿಸುವ ಮೂಲಕ ಅವರ ಶಕ್ತಿಯನ್ನು ಕುಂದಿಸಿ, ಪಕ್ಷವನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಕೆಲಸ ನಡೆದಿದೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com