ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಒಬ್ಬರನ್ನೊಬ್ಬರು ಮುಖ ನೋಡಿಕೊಳ್ಳದ ಪರಿಸ್ಥಿತಿಗೆ ಬಂದಿದೆ: ನಳಿನ್‍ ಕುಮಾರ್ ಕಟೀಲ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖವನ್ನು ಸಿದ್ದರಾಮಯ್ಯ ಅವರು ನೋಡುತ್ತಿಲ್ಲ. ಸಿದ್ದರಾಮಯ್ಯ ಮುಖವನ್ನು ಡಿಕೆ ಶಿವಕುಮಾರ್ ನೋಡುತ್ತಿಲ್ಲ. ಕಾಂಗ್ರೆಸ್ ಒಳಜಗಳ ಬೀದಿ ಜಗಳವಾಗಿ ಪರಿವರ್ತನೆಗೊಂಡಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.

Published: 03rd April 2021 07:40 PM  |   Last Updated: 03rd April 2021 07:40 PM   |  A+A-


siddaramaiah-DK Shivakumar

ಸಿದ್ದರಾಮಯ್ಯ-ಶಿವಕುಮಾರ್

Posted By : Vishwanath S
Source : UNI

ಬಸವಕಲ್ಯಾಣ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖವನ್ನು ಸಿದ್ದರಾಮಯ್ಯ ಅವರು ನೋಡುತ್ತಿಲ್ಲ. ಸಿದ್ದರಾಮಯ್ಯ ಮುಖವನ್ನು ಡಿಕೆ ಶಿವಕುಮಾರ್ ನೋಡುತ್ತಿಲ್ಲ. ಕಾಂಗ್ರೆಸ್ ಒಳಜಗಳ ಬೀದಿ ಜಗಳವಾಗಿ ಪರಿವರ್ತನೆಗೊಂಡಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.

ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ರಾಜ್ಯದಲ್ಲಿ ಕಳೆದು ಹೋಗಿದೆ. ಕಾಂಗ್ರೆಸ್ ಪಕ್ಷವು ಒಳಜಗಳದಿಂದಾಗಿ ನೆಲೆ ಕಳೆದುಕೊಳ್ಳಲಿದೆ. ಕಾಂಗ್ರೆಸ್ ಪಕ್ಷದ ಮನೆ ಖಾಲಿಯಾಗಿದೆ. ಬಿಜೆಪಿ ಹಡಗು ತುಂಬುತ್ತಿದೆ. ಸಿದ್ದರಾಮಯ್ಯ ಅವರು ಅಧಿಕಾರದ ಗದ್ದುಗೆಗೆ ಏರಲು 'ಅಹಿಂದ'ವನ್ನು ಬಳಸಿಕೊಂಡರು. ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಕಾಂಗ್ರೆಸ್ ಪಕ್ಷದ ಮುಖಂಡರು ದಲಿತರಿಗೆ ನ್ಯಾಯವನ್ನು ಒದಗಿಸಿಲ್ಲ. ದಲಿತ ಮುಖಂಡರನ್ನು ಅಧಿಕಾರ ಪಡೆಯಲು ಮಾತ್ರ ಬಳಸಿಕೊಂಡಿದೆ ಎಂದರು.
 
ಕಾಂಗ್ರೆಸ್ ಪಕ್ಷವು ಕೇವಲ ಡಾ. ಪರಮೇಶ್ವರ್ ಅವರನ್ನು ಸೋಲಿಸಿದ್ದಲ್ಲ; ಅದು ಡಾ. ಬಿ.ಆರ್. ಅಂಬೇಡ್ಕರ್ ಅವರಿಗೂ ಅನ್ಯಾಯ ಮಾಡಿದೆ. ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಪ್ರಾಣ ತ್ಯಾಗ ಆದಾಗ ಅವರ ಶವ ಸಂಸ್ಕಾರಕ್ಕೆ ದೆಹಲಿಯಲ್ಲಿ ಜಾಗ ನೀಡದೆ ಅನ್ಯಾಯ ಮಾಡಿದೆ. ಲೋಕಸಭಾ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದಾಗ ಅವರ ಸೋಲಿಗೆ ಕಾರಣವಾಗಿತ್ತು ಎಂದು ವಿವರಿಸಿದರು.
 
ದಲಿತ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಾಕಿಸಿದ ಕಾಂಗ್ರೆಸಿಗರು ಶಾಸಕರ ಮನೆಗೆ ಬೆಂಕಿ ಹಾಕಿದ ಸಂಪತ್‍ರಾಜ್‍ನನ್ನು ಈ ವರೆಗೆ ಉಚ್ಚಾಟನೆ ಮಾಡಿಲ್ಲ. ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ನ್ಯಾಯ ಕೊಟ್ಟಿಲ್ಲ, ಕಾಂಗ್ರೆಸ್‍ಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಶಾಪ ಇದೆ. ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ನೀಡುವ ಕೆಲಸವನ್ನು ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ಸರಕಾರ ಮಾಡಿದೆ ಎಂದು ಹೇಳಿದರು.

ದೇಶದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ. ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಶತಸಿದ್ದ ಎಂದು ನಳಿನ್‍ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

ಹೈದರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡುವ ಜೊತೆಗೆ ಈ ಭಾಗದ ಅಭಿವೃದ್ಧಿಗೆ ಗರಿಷ್ಠ ಅನುದಾನವನ್ನು ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರಕಾರವು ಕೋವಿಡ್ ಸಂಕಷ್ಟವನ್ನು ಯಶಸ್ವಿಯಾಗಿ ನಿಭಾಯಿಸಿದೆ. ಅಲ್ಲದೆ, ಅತ್ಯುತ್ತಮ ಬಜೆಟ್ ಅನ್ನು ನೀಡಿದೆ ಎಂದು ಅವರು ಶ್ಲಾಘಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಅತ್ಯುತ್ತಮ ಜನಪರ ಕಾರ್ಯಗಳನ್ನು ಜನರು ಬೆಂಬಲಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ನರೇಂದ್ರ ಮೋದಿ ಅವರ ಸರಕಾರವು ಜನಧನ್ ಖಾತೆಗಳ ಮೂಲಕ ಬಡ ಮಹಿಳೆಯರ ಸಶಕ್ತೀಕರಣ, ಶೌಚಾಲಯದ ಸಮಸ್ಯೆ ಇರುವ ಉತ್ತರ ಕರ್ನಾಟಕದ ಮಹಿಳೆಯರ ಸಮಸ್ಯೆ ನಿವಾರಣೆ ಮಾಡಿದೆ. ಉಜ್ವಲ ಯೋಜನೆ ಮೂಲಕ ಸಿಲಿಂಡರ್ ಒದಗಿಸುವ ಕಾರ್ಯ, ಆಯುಷ್ಮಾನ್ ಯೋಜನೆ ಮೂಲಕ ಬಡವರಿಗೆ ವಿಮೆ ಒದಗಿಸುವ ಸತ್ಕಾರ್ಯ ಮಾಡಿದ್ದಲ್ಲದೆ, ಕೋವಿಡ್ ಸಂದರ್ಭದಲ್ಲಿ ಮನೆ ಮನೆಗಳಿಗೆ ಆಹಾರ ಧಾನ್ಯ ಒದಗಿಸಿತ್ತು. ಈ ಎಲ್ಲಾ ಅತ್ಯುತ್ತಮ ಜನಪರ ಯೋಜನೆಗಳನ್ನು ಗಮನಿಸಿ ಮತದಾರರು ಬಿಜೆಪಿಯನ್ನು ನಿರಂತರವಾಗಿ ಬೆಂಬಲಿಸಿದ್ದಾರೆ. ಮುಂದೆಯೂ ಬೆಂಬಲಿಸಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದ ಎಸ್.ಸಿ. ಮುಖಂಡ ರವಿ ಗಾಯಕ್‍ವಾಡ್ ಮತ್ತು ಅವರ ಬೆಂಬಲಿಗರು, ಟೋಕರಿ ಕೋಳಿ ಸಮಾಜದ ತಾಲ್ಲೂಕಿನ ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡರು. ಸಂಸದ ಭಗವಂತ ಖೂಬಾ, ಸಚಿವ ಪ್ರಭು ಚೌಹಾಣ್, ರಾಜ್ಯ ಎಸ್.ಸಿ. ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಜಿಲ್ಲಾಧ್ಯಕ್ಷ ಶಿವಾನಂದ ಮಂಟಾಳ್ಕರ್, ಅಭ್ಯರ್ಥಿ ಶರಣು ಸಲಗರ್, ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.


Stay up to date on all the latest ರಾಜಕೀಯ news
Poll
Virat_Kohli1

ಟಿ20 ನಾಯಕ ಸ್ಥಾನದಿಂದ ಕೆಳಗಿಳಿಯುವ ವಿರಾಟ್ ಕೊಹ್ಲಿ ನಡೆಯನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp