ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆ: ಗೆಲ್ಲುವವರಿಗಿಂತಲೂ ನಿಷ್ಠಾವಂತರಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧಾರ
ಮುಂಬರುವ ಜಿಲ್ಲಾ ಮತ್ತು ಪಂಚಾಯತ್ ಚುನಾವಣೆಗೆ ಗೆಲ್ಲುವವರಿಗಿಂತಲೂ ನಿಷ್ಠಾವಂತರಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
Published: 04th April 2021 10:30 AM | Last Updated: 04th April 2021 10:30 AM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಮುಂಬರುವ ಜಿಲ್ಲಾ ಮತ್ತು ಪಂಚಾಯತ್ ಚುನಾವಣೆಗೆ ಗೆಲ್ಲುವವರಿಗಿಂತಲೂ ನಿಷ್ಠಾವಂತರಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಯ ಡಿಲಿಮಿಟೇಷನ್ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗ ಪೂರ್ಣಗೊಳಿಸಿದೆ. ಮೀಸಲಾತಿ ಕುರಿತು ಅಧಿಸೂಚನೆ ಹೊರಬೀಳುತ್ತಿದ್ದಂತೆಯೇ ಎಲ್ಲಾ ಪಕ್ಷಗಳ ನಾಯಕರ ಲಾಬಿ ಆರಂಭವಾಗಲಾಗಿದೆ.
ಈ ಬಾರಿ ರಾಜ್ಯದ ಜಿಲ್ಲಾ ಪಂಚಾಯತ್ ಸ್ಥಾನಗಳ ಸಂಖ್ಯೆ ಸುಮಾರು 100 ರಿಂದ 1,190ಕ್ಕೆ ಏರಿಕೆಯಾಗಲಿದ್ದು, ತಾಲೂಕು ಪಂಚಾಯತ್ ಸೀಟುಗಳು 3,273ರಿಂದ 600ರಷ್ಟು ಇಳಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಜಿಲ್ಲಾ ಪಂಚಾಯತಿಯಲ್ಲಿ ಪ್ರತಿ ಕ್ಷೇತ್ರದ ಮತದಾರರ ಸಂಖ್ಯೆ 40,000 ದಿಂದ 35,000ಕ್ಕೆ ಮತ್ತು ತಾಲೂಕು ಪಂಚಾಯಿತಿಯಲ್ಲಿ 10,000 ದಿಂದ 12,500 ಕ್ಕೆ ಏರಿಕೆಯಾಗಿರುವುದು ಇದಕ್ಕೆ ಕಾರಣ ಎನ್ನಲಾಗುತ್ತಿದೆ.
ಜೂನ್ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು. ಈ ಬಾರಿಯ ಅಭ್ಯರ್ಥಿಗಳ ಆಯ್ಕೆ ಪಕ್ಷದ ಶಾಸಕರು ಅಥವಾ ಸಂಸದರ ಶಿಫಾರಸುಗಳನ್ನು ಆಧರಿಸಿ ನಡೆಯುವುದಿಲ್ಲ, ಕಾರ್ಯಕರ್ತರು ಹಾಗೂ ನಾಯಕರ ಪ್ರತಿಕ್ರಿಯೆಗಳನ್ನು ಆಧರಿಸಿ ಆಯ್ಕೆ ಮಾಡಲಾಗುತ್ತದೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ.
ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುವವರಿಗಿಂತಲೂ ಪಕ್ಷಕ್ಕಾಗಿ ತಮ್ಮನ್ನು ತಾವು ಮುಡಿಪಾಗಿಟ್ಟು ನಿಷ್ಠೆ ಪ್ರದರ್ಶಿಸುವವರಿಗೆ ಟಿಕೆಟ್ ನೀಡಲು ಪಕ್ಷ ನಿರ್ಧರಿಸಿದೆ ಎಂದು ಬಿಜೆಪಿ ಹಿರಿಯ ನಾಯಕ ಅಶ್ವತ್ಥ್ ನಾರಾಯಣ್ ಗೌಡ ಅವರು ಹೇಳಿದ್ದಾರೆ.
ಪಕ್ಷಕ್ಕಾಗಿರುವ ಬದ್ಧತೆ, ಹಿರಿತನ, ಸಾಮರ್ಥ್ಯ, ಸ್ಥಾನದ ಜವಾಬ್ದಾರಿ ಅರಿತು ಕೆಲಸ ಮಾಡುವುದು ಅಭ್ಯರ್ಥಿಗಳ ಆಯ್ಕೆಗೆ ಇರುವ ಮಾನದಂಡಗಳಾಗಿವೆ ಎಂದು ತಿಳಿಸಿದ್ದಾರೆ.
ಅಶ್ವತ್ ನಾರಾಯಣ್ ಗೌಡ ಅವರು ಬಳ್ಳಾರಿಯಲ್ಲಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ.
ಪಕ್ಷವು ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಕ್ಕೂ ಮುನ್ನ ಬೂತ್ ಮಟ್ಟದ ಕಾರ್ಯಕರ್ತರು ಮತ್ತು ಶಕ್ತಿ ಕೇಂದ್ರಗಳ ಸದಸ್ಯರೊಂದಿಗೆ ಸರಣಿ ಸಭೆಗಳನ್ನು ನಡೆಸಲು ಬಿಜೆಪಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣದ ವಿಧಾನಸಭಾ ಕ್ಷೇತ್ರದ ಉಪಚನಾವಣೆಗಳ ಬಳಿಕ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಜಿಲ್ಲಾ ಹಾಗೂ ತಾಲೂಕು ಚುನಾವಣೆಗಳತ್ತ ಗಮನಹರಿಸಲಿದೆ ಎನ್ನಲಾಗುತ್ತಿದೆ.