'ಧೃತರಾಷ್ಟ್ರ ಪ್ರೇಮದಲ್ಲಿ ಬಿಎಸ್ವೈ: ವಿಜಯೇಂದ್ರ ನಿರ್ದೇಶನದಂತೆ ರಾಜ್ಯ ಬಿಜೆಪಿ ಸರ್ಕಾರದ ಆಡಳಿತ'
ನಮ್ಮ ಕ್ಷೇತ್ರಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ, ನಮ್ಮ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡದ ಕಾರಣ ಯಾವುದೇ ಕೆಲಸಗಳು ನಡೆಯದೇ ಜನತೆ ನಮ್ಮ ಮೇಲೆ ಅಸಮಾಧಾನಗೊಂಡಿದ್ದಾರೆ ಎಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತ ಪಡಿಸಿದ್ದಾರೆ.
Published: 05th April 2021 10:23 AM | Last Updated: 05th April 2021 10:23 AM | A+A A-

ಕಾಂಗ್ರೆಸ್ ಶಾಸಕರ ಸುದ್ದಿಗೋಷ್ಠಿ
ಮೈಸೂರು: ನಮ್ಮ ಕ್ಷೇತ್ರಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ, ನಮ್ಮ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡದ ಕಾರಣ ಯಾವುದೇ ಕೆಲಸಗಳು ನಡೆಯದೇ ಜನತೆ ನಮ್ಮ ಮೇಲೆ ಅಸಮಾಧಾನಗೊಂಡಿದ್ದಾರೆ ಎಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತ ಪಡಿಸಿದ್ದಾರೆ.
ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಕಾಂಗ್ರೆಸ್ ಶಾಸಕರಾದ ಎಚ್.ಪಿ.ಮಂಜುನಾಥ್, ಯತೀಂದ್ರ ಸಿದ್ದರಾಮಯ್ಯ ಬಿ.ಎಸ್.ಯಡಿಯೂರಪ್ಪ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿಲ್ಲ. ತಮ್ಮ ಕುಟುಂಬ ಹಾಗೂ ಸಂಬಂಧಿಕರಿಗಷ್ಟೇ ಸಿಎಂ ಆಗಿದ್ದಾರೆ. ರಾಜ್ಯದಲ್ಲಿ ಇರೋದು ಬಿಜೆಪಿ ನೇತೃತ್ವದ ಸರ್ಕಾರವಲ್ಲ. ಬಿಎಸ್ವೈ ಕುಟುಂಬ ಸರ್ಕಾರ’ ಎಂದು ವಾಗ್ದಾಳಿ ನಡೆಸಿದರು.
‘ಅರುಳು–ಮರುಳಿನಲ್ಲಿರುವ ಯಡಿಯೂರಪ್ಪ ತಮ್ಮ ಕುಟುಂಬದ ರಬ್ಬರ್ ಸ್ಟ್ಯಾಂಪ್ ಆಗಿದ್ದಾರೆ. ಸಹಿ ಹಾಕಲಿಕ್ಕಷ್ಟೇ ಸೀಮಿತವಾಗಿದ್ದಾರೆ. ಡಮ್ಮಿ ಮುಖ್ಯಮಂತ್ರಿಯಾಗಿದ್ದು, ಧೃತರಾಷ್ಟ್ರ ಪ್ರೇಮದಿಂದ ತಮ್ಮ ಅಧಿಕಾರವನ್ನು ವಿಜಯೇಂದ್ರಗೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸರ್ಕಾರದಲ್ಲಿ ಯಾವೊಬ್ಬ ಸಚಿವ, ಉನ್ನತ ಅಧಿಕಾರಿ, ಸ್ವತಃ ಯಡಿಯೂರಪ್ಪ ಬಳಿಗೆ ಹೋದರೂ ಏನೊಂದು ಕೆಲಸ ಆಗಲ್ಲ. ಕುಟುಂಬದವರ ಮೂಲಕ ವಿಜಯೇಂದ್ರ ಬಳಿಗೆ ಹೋದರೆ ಮಾತ್ರ ಅನುದಾನ ಬಿಡುಗಡೆಯಾಗಲಿದೆ. ಇದಕ್ಕಾಗಿಯೇ ಅಧಿಕಾರಿಗಳು, ಸಚಿವರು, ಮುಖ್ಯಮಂತ್ರಿ ಗೃಹ ಕಚೇರಿ ಬದಲು; ವಿಜಯೇಂದ್ರ ಫ್ಲಾಟ್ ಮುಂಭಾಗ ಕೈಕಟ್ಟಿಕೊಂಡು ನಿಲ್ಲುತ್ತಿದ್ದಾರೆ. ಪೊಲೀಸರು ಅಲ್ಲಿಗೆ ಹೆಚ್ಚಿನ ರಕ್ಷಣೆ ನೀಡಿದ್ದಾರೆ’ ಎಂದು ಶಾಸಕರು ಹರಿಹಾಯ್ದರು.