ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಪ್ರೋತ್ಸಾಹಿಸುವ, ಬೆಂಬಲಿಸುವ ಏಕೈಕ ಪಕ್ಷ ಬಿಜೆಪಿ: ತೇಜಸ್ವಿ ಸೂರ್ಯ

ಇತ್ತೀಚಿಗೆ ತಮಿಳುನಾಡು ವಿಧಾನಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಹೋಟೆಲ್ ನಲ್ಲಿ ತಿಂಡಿ ತಿಂದು ಟ್ವೀಟ್ ಮಾಡಿ  ಆಕ್ಷೇಪಕ್ಕೆ ಗುರಿಯಾಗಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಇದೀಗ, ಪ್ರಾದೇಶಿಕ ಭಾಷೆಗಳ ಮೇಲೆ ಬಿಜೆಪಿ ಪಕ್ಷಕ್ಕಿರುವ ಕಾಳಜಿ ಬಗ್ಗೆ ಮಾತನಾಡಿದ್ದಾರೆ.

Published: 05th April 2021 07:38 PM  |   Last Updated: 05th April 2021 07:39 PM   |  A+A-


Tejasvi_surya1

ಸಂಸದ ತೇಜಸ್ವಿ ಸೂರ್ಯ

Posted By : Nagaraja AB
Source : Online Desk

ಬೆಂಗಳೂರು: ಇತ್ತೀಚಿಗೆ ತಮಿಳುನಾಡು ವಿಧಾನಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಹೋಟೆಲ್ ನಲ್ಲಿ ತಿಂಡಿ ತಿಂದು ಟ್ವೀಟ್ ಮಾಡಿ  ಆಕ್ಷೇಪಕ್ಕೆ ಗುರಿಯಾಗಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಇದೀಗ, ಪ್ರಾದೇಶಿಕ ಭಾಷೆಗಳ ಮೇಲೆ ಬಿಜೆಪಿ ಪಕ್ಷಕ್ಕಿರುವ ಕಾಳಜಿ ಬಗ್ಗೆ ಮಾತನಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಪ್ರೋತ್ಸಾಹಿಸುವ , ಬೆಂಬಲಿಸುವ ಏಕೈಕ ಪಕ್ಷ ಬಿಜೆಪಿ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ರಾಷ್ಟ್ರೀಯ ಶಿಕ್ಷಣ ನೀತಿ 2021ರಲ್ಲಿ ಪ್ರಾದೇಶಿಕ ಭಾಷೆಗಳಲ್ಲಿಯೇ ಶಿಕ್ಷಣ ಒದಗಿಸಲಾಗುವುದು, ತ್ರಿಭಾಷಾ ನೀತಿಯಲ್ಲಿ ಯಾವುದಾದರೂ ಎರಡು ಭಾರತೀಯ ಭಾಷೆಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ಅಂಶಗಳಿಗೆ ಒತ್ತು ನೀಡಿರುವುದಾಗಿ ತಿಳಿಸಿರುವ ತೇಜಸ್ವಿ ಸೂರ್ಯ, ಡಿಎಂಕೆ ಮತ್ತು ಯುಪಿಎ ಏಕೆ ಇದನ್ನು ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

 

Stay up to date on all the latest ರಾಜಕೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp