'ಸಿಎಂ ಆಗುವ ಕನಸಿಗೆ ತೊಡಕಾಗಿರುವ ಡಿಕೆಶಿ ಮಣಿಸಲು ಸಿದ್ದರಾಮಯ್ಯ ಅವರಿಗೆ ಇದೊಂದು ಸದಾವಕಾಶ'

ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ಹೆಸರು ಕೇಳಿಬರುತ್ತಿದ್ದಂತೆ ಸಿದ್ದರಾಮಯ್ಯ ಬಣ ಎಚ್ಚೆತ್ತುಕೊಂಡಿದೆ ಎಂದು ಬಿಜೆಪಿ ಹೇಳಿದೆ.

Published: 05th April 2021 02:05 PM  |   Last Updated: 05th April 2021 02:05 PM   |  A+A-


Siddaramaiah

ಸಿದ್ದರಾಮಯ್ಯ

Posted By : Shilpa D
Source : Online Desk

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ಹೆಸರು ಕೇಳಿಬರುತ್ತಿದ್ದಂತೆ ಸಿದ್ದರಾಮಯ್ಯ ಬಣ ಎಚ್ಚೆತ್ತುಕೊಂಡಿದೆ ಎಂದು ಬಿಜೆಪಿ ಹೇಳಿದೆ.

ಈ ಕುರಿತು ಸೋಮವಾರ ಟ್ವೀಟ್‌ ಮಾಡಿರುವ ಕರ್ನಾಟಕ ಬಿಜೆಪಿ, ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಹೆಸರು ತಳುಕು ಹಾಕಿಕೊಳ್ಳುತ್ತಲೇ ಸಿದ್ದರಾಮಯ್ಯ ಬಣ ಎಚ್ಚೆತ್ತುಕೊಂಡಿದೆ. ಸಿಎಂ ಆಗುವ ಕನಸಿಗೆ ತೊಡಕಾಗಿರುವ ಡಿಕೆಶಿ ಅವರನ್ನು ಮಣಿಸಲು ಸಿದ್ದರಾಮಯ್ಯ ಅವರಿಗೆ ಇದೊಂದು ಸದಾವಕಾಶ. ಈ ಪ್ರಕರಣದಲ್ಲಿ ಡಿಕೆಶಿ ಅವರನ್ನು ಸಿಲುಕಿಸಲು ಶ್ರಮಿಸುತ್ತಿರುವ ಸಿದ್ದರಾಮಯ್ಯಗೆ ಶುಭವಾಗಲಿ' ಎಂದು ಬಿಜೆಪಿ ಟ್ವೀಟ್ ಮಾಡಿದೆ. 

ಸದನದಲ್ಲಿ ಸಿಡಿ ವಿಚಾರದ ಬಗ್ಗೆ ಚರ್ಚಿಸುವಾಗ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ಹೆಸರು ಪ್ರಸ್ತಾಪವಾಗಿರಲಿಲ್ಲ. ಹೀಗಾಗಿ, ಸದನದಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ರೋಷಾವೇಶ ಪ್ರದರ್ಶಿಸಿದರು. ಈಗ ಷಡ್ಯಂತ್ರದಲ್ಲಿ ಡಿಕೆಶಿ ಹೆಸರು ಕೇಳಿ ಬರುತ್ತಿದೆ. ಆ ಕಾರಣ ಡಿಕೆಶಿ ಮೌನವಾಗಿದ್ದಾರೆ. ಸಿದ್ದರಾಮಯ್ಯ ಮತ್ತೆ ಮತ್ತೆ ಸಿಡಿ ವಿಚಾರವನ್ನು ಕೆದಕುತ್ತಿದ್ದಾರೆ' ಎಂದು ತಿಳಿಸಿದೆ. 

ಮೇಟಿ ಪ್ರಕರಣದಲ್ಲಿ ಸಂತ್ರಸ್ಥೆ ಪ್ರಕರಣ ದಾಖಲಿಸಿದರೂ ಎಫ್‌ಐಆರ್ ಕೂಡಾ ಮಾಡಿರಲಿಲ್ಲ, ವಿಚಾರಣೆ ಕೂಡಾ ನಡೆಸಿರಲಿಲ್ಲ.

ಈಗ  ಕರ್ನಾಟಕ ಕಾಂಗ್ರೆಸ್   ಧ್ವನಿ ಎತ್ತುತ್ತಿರುವುದು ಸಂತ್ರಸ್ಥೆಗಾಗಿ ಅಲ್ಲ, ಸಿದ್ದರಾಮಯ್ಯಗಾಗಿ, ಡಿಕೆ ಶಿವಕುಮಾರ್ ಅವರನ್ನು ಸಿಕ್ಕಿಸಿ ಹಾಕಲು , ಸಿದ್ದರಾಮಯ್ಯ ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

Stay up to date on all the latest ರಾಜಕೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp