ವಿಚಾರಣೆಯಿಂದ ರಮೇಶ್ 'ಜಾರಿಕೊಳ್ಳಲು' ಕೊರೋನಾ ಹೆಸರಿನ ನೆಪವೇ?: ಕಾಂಗ್ರೆಸ್ ಲೇವಡಿ
ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾಗೆ ತುತ್ತಾಗಿದ್ದು ಇದನ್ನು ಲೇವಡಿ ಮಾಡಿರುವ ಕಾಂಗ್ರೆಸ್ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೋನಾ ಹೆಸರಿನ ನೆಪವೇ? ಎಂದು ಪ್ರಶ್ನಿಸಿದೆ.
Published: 05th April 2021 04:42 PM | Last Updated: 05th April 2021 04:52 PM | A+A A-

ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾಗೆ ತುತ್ತಾಗಿದ್ದು ಇದನ್ನು ಲೇವಡಿ ಮಾಡಿರುವ ಕಾಂಗ್ರೆಸ್ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೋನಾ ಹೆಸರಿನ ನೆಪವೇ? ಎಂದು ಪ್ರಶ್ನಿಸಿದೆ.
ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಎಸ್ಐಟಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು ಅವರ ಬಿಪಿ, ಶುಗರ್ ನಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅವರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ಕೋವಿಡ್ ನಿಯಮದಂತೆ 5 ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಗೋಕಾಕ್ ತಾಲೂಕು ಆಸ್ಪತ್ರೆಯ ವೈದ್ಯ ಡಾ. ರವೀಂದ್ರ ಹೇಳಿದ್ದರು.
ರಮೇಶ್ ಜಾರಕಿಹೊಳಿ ಅವರು ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೋನಾ ನೆಪ ಹೇಳುತ್ತಿದ್ದಾರೆ ಎಂದು ಪ್ರಶ್ನಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ದಲಿತಪರ ಧ್ವನಿಗಳಾಗಿದ್ದ ಚಿಂತಕರ ವೃದ್ಧಾಪ್ಯವನ್ನು ಲೆಕ್ಕಿಸದೆ, ಅನಾರೋಗ್ಯವನ್ನೂ ಪರಿಗಣಿಸದೆ ಕ್ರೂರವಾಗಿ ನಡೆಸಿಕೊಂಡ ಬಿಜೆಪಿ ಈಗ ಅತ್ಯಾಚಾರ ಆರೋಪಿಗೆ ಅನಾರೋಗ್ಯದ ನೆಪ ಹೇಳುವುದು ಹಾಸ್ಯಾಸ್ಪದ. "ಕಳ್ಳನಿಗೊಂದು ಪಿಳ್ಳೆ ನೆಪ"!! ಎಂದು ಟ್ವೀಟ್ ಮಾಡಿದೆ.
ರಮೇಶ್ ಜಾರಕಿಹೊಳಿ "ಜಾರಿಕೊಳ್ಳಲು" ಕರೋನಾ ಹೆಸರಿನ ನೆಪವೇ?
— Karnataka Congress (@INCKarnataka) April 5, 2021
ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ದಲಿತಪರ ಧ್ವನಿಗಳಾಗಿದ್ದ ಚಿಂತಕರ ವೃದ್ಧಾಪ್ಯವನ್ನು ಲೆಕ್ಕಿಸದೆ, ಅನಾರೋಗ್ಯವನ್ನೂ ಪರಿಗಣಿಸದೆ ಕ್ರೂರವಾಗಿ ನಡೆಸಿಕೊಂಡ ಬಿಜೆಪಿ ಈಗ ಅತ್ಯಾಚಾರ ಆರೋಪಿಗೆ ಅನಾರೋಗ್ಯದ ನೆಪ ಹೇಳುವುದು ಹಾಸ್ಯಾಸ್ಪದ.
"ಕಳ್ಳನಿಗೊಂದು ಪಿಳ್ಳೆ ನೆಪ"!!