ಸಿಡಿ ಪ್ರಕರಣ ಸಂತ್ರಸ್ತೆಗೆ ಕಿರುಕುಳ, ಆರೋಪಿಗೆ ರಾಜ ಮರ್ಯಾದೆ: ಕಾಂಗ್ರೆಸ್

ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣ ಸಂಬಂಧ ಕಾಂಗ್ರೆಸ್-ಬಿಜೆಪಿ ನಡುವಿನ ಟ್ವೀಟ್ ವಾರ್ ಮುಂದುವರೆದಿದ್ದು, ಸಿಡಿ ಪ್ರಕರಣದ ಆರೋಪಿ ತಲೆಮರೆಸಿಕೊಳ್ಳಲು ಸಹಕರಿಸಿದ ಕುಖ್ಯಾತಿ ಸರ್ಕಾರಕ್ಕೆ ಸಲ್ಲಬೇಕು ಎಂದು ಕಾಂಗ್ರೆಸ್ ಎದಿರೇಟು ಹಾಕಿದೆ

Published: 05th April 2021 11:10 AM  |   Last Updated: 05th April 2021 12:40 PM   |  A+A-


Ramesh jarkiholi

ರಮೇಶ್ ಜಾರಕಿಹೊಳಿ

Posted By : Shilpa D
Source : UNI

ಬೆಂಗಳೂರು:  ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣ ಸಂಬಂಧ ಕಾಂಗ್ರೆಸ್-ಬಿಜೆಪಿ ನಡುವಿನ ಟ್ವೀಟ್ ವಾರ್ ಮುಂದುವರೆದಿದ್ದು, ಸಿಡಿ ಪ್ರಕರಣದ ಆರೋಪಿ ತಲೆಮರೆಸಿಕೊಳ್ಳಲು ಸಹಕರಿಸಿದ ಕುಖ್ಯಾತಿ ಸರ್ಕಾರಕ್ಕೆ ಸಲ್ಲಬೇಕು ಎಂದು ಕಾಂಗ್ರೆಸ್ ಎದಿರೇಟು ಹಾಕಿದೆ.

ಸಿಡಿ ಪ್ರಕರಣ ಸಂಬಂಧ ಸರಣಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಸಂತ್ರಸ್ತ ಯುವತಿ ಹಾಜರಾದ ದಿನದಿಂದಲೂ ಆರೋಪಿ ತಲೆಮರೆಸಿಕೊಂಡಿದ್ದಾರೆ, ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎನ್ನುವುದು ತಿಳಿದಿಲ್ಲ. ಆರೋಪಿಯೊಬ್ಬನನ್ನು ತಲೆಮರೆಸಿಕೊಳ್ಳಲು ಸಹಕರಿಸಿದ ಕುಖ್ಯಾತಿ ಈ ಸರ್ಕಾರಕ್ಕೆ ಸಲ್ಲಬೇಕು. ಅತ್ಯಾಚಾರ ಆರೋಪಿ ರಕ್ಷಿಸುವ ಕೀರ್ತಿ ಬಿಜೆಪಿಗೆ ಸಲ್ಲಬೇಕು ಎಂದು ವ್ಯಂಗ್ಯವಾಡಿದೆ.

ರಮೇಶ್ ಜಾರಕಿಹೊಳಿಯ ಅತ್ಯಾಚಾರ ಪ್ರಕರಣವೊಂದೇ ಸಾಕು ಬಿಜೆಪಿ ಆಡಳಿತದ ನಿಜಬಣ್ಣ ತಿಳಿಯಲು. ದೂರು ನೀಡಿದ ಸಂತ್ರಸ್ತೆಯನ್ನು ಆರೋಪಿಯಂತೆ ಸತತವಾಗಿ ವಿಚಾರಣೆ ನಡೆಸಲಾಗುತ್ತಿದೆ. ಅತ್ಯಾಚಾರ ಆರೋಪಿಯನ್ನು ರಾಜಮರ್ಯಾದೆಯಲ್ಲಿ ನೆಪಮಾತ್ರದ ವಿಚಾರಣೆ ನಡೆಸಲಾಗಿದೆ ಎಂದು ಆರೋಪಿಸಿದೆ.

ಈ ಪ್ರಕರಣದಿಂದ ಚಳಿ ಜ್ವರ ಬಂದಿರುವ ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಪೊಲೀಸರೂ ಆರೋಪಿ ತಲೆಮರೆಸಿಕೊಳ್ಳುವ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ, ಆರೋಪಿಯ ಮೊಬೈಲ್‌ನ್ನು ಹಲವು ದಿನಗಳವರೆಗೆ ಪೊಲೀಸರು ವಶಪಡಿಸಿಕೊಂಡಿಲ್ಲ, ಸಾಕ್ಷ್ಯ ನಾಶಕ್ಕೆ ಸಾಕಷ್ಟು ಸಮಯ ಬೇಕಿತ್ತೋ ಏನೋ!

ಆರೋಪಿ ಮಾಜಿ ಮಂತ್ರಿಯನ್ನು ವಿಚಾರಣೆಗೆ ಕರೆಸಿ ಹಿಂಬಾಗಿಲ ಮೂಲಕ ಕಳಿಸಿಕೊಡುತ್ತಾರೆ ಪೊಲೀಸರು. ಸಂತ್ರಸ್ತೆಗೆ ವಿಶ್ರಾಂತಿಯೂ ನೀಡದಂತೆ ಸತತ ವಿಚಾರಣೆ ನಡೆಸುತ್ತಾರೆ. ಆರೋಪಿಯನ್ನು ಕರೆದುಕೊಂಡು ಹೋಗಿ ಮಹಜರು ಮಾಡುವ ಬದಲಿಗೆ ಸಂತ್ರಸ್ತೆಯನ್ನು ಕಾಡಿಸಿ ಮಹಜರು ನಡೆಸಲಾಗುತ್ತಿದೆ. 

ಆರೋಪಿಯ ಕುಟುಂಬ, ಆರೋಪಿ ವಾಸಿಸುತ್ತಿದ್ದ ಸ್ಥಳ, ಬಳಸುತ್ತಿದ್ದ ಮೊಬೈಲ್ ಮುಂತಾದವುಗಳನ್ನು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುವುದು ಸಾಮಾನ್ಯ ಪ್ರಕ್ರಿಯೆ. ಆದರೆ ಇಲ್ಲಿ ಎಲ್ಲವೂ ಉಲ್ಟಾ, ದೂರು ನೀಡಿದ ಸಂತ್ರಸ್ತೆಯನ್ನೇ ಆರೋಪಿ ಎನ್ನುವಂತೆ ನಡೆಸಿಕೊಳ್ಳಲಾಗುತ್ತಿದೆ.

ಆರೋಪಿಯನ್ನು ಬಂಧಿಸದೇ ಚುನಾವಣಾ ಪ್ರಚಾರಕ್ಕೆ ಸ್ವತಃ ಮುಖ್ಯಮಂತ್ರಿ ಕರೆಯುತ್ತಾರೆ. ಸ್ವತಃ ಸಿಎಂ ತನಿಖೆ ನಡೆಸದೆ ಅವರದು ತಪ್ಪಿಲ್ಲ ಎಂದು ಕ್ಲೀನ್ ಚಿಟ್ ನೀಡುತ್ತಾರೆ. ನಾವೆಲ್ಲ ಆರೋಪಿ ಬೆಂಬಲಕ್ಕಿದ್ದೇವೆ ಎಂದು ಹಲವು ಸಚಿವರು ಹೇಳುತ್ತಾರೆ. ಇದೆಲ್ಲವೂ ಆರೋಪಿಯನ್ನು ಬಿಜೆಪಿ ರಕ್ಷಿಸುತ್ತಿದೆ ಎನ್ನಲು ನಿದರ್ಶನ.

Stay up to date on all the latest ರಾಜಕೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp