ಸಿಡಿ ಇಟ್ಟುಕೊಂಡು ಯಡಿಯೂರಪ್ಪನವರಿಗೆ ಬೆದರಿಕೆ ಹಾಕಿ ಮುರುಗೇಶ್ ನಿರಾಣಿ ಸಚಿವರಾಗಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್ 

ಸಿಎಂ ಯಡಿಯೂರಪ್ಪ ಮತ್ತು ಅವರ ಪುತ್ರ ಬಿ ವೈ ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮುಂದುವರಿಸಿದ್ದಾರೆ.

Published: 05th April 2021 08:13 AM  |   Last Updated: 05th April 2021 09:45 AM   |  A+A-


Basana Gowda Patil Yatnal

ಬಸನಗೌಡ ಪಾಟೀಲ್ ಯತ್ನಾಳ್

Posted By : Sumana Upadhyaya
Source : The New Indian Express

ವಿಜಯಪುರ: ಸಿಎಂ ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮುಂದುವರಿಸಿದ್ದಾರೆ.

ಮೇ 2ರೊಳಗೆ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಬೇರೆಯವರನ್ನು ಪಕ್ಷದ ಹೈಕಮಾಂಡ್ ಬದಲಾಯಿಸದಿದ್ದರೆ ಪಕ್ಷದೊಳಗೆ ಮತ್ತಷ್ಟು ಭಿನ್ನಮತ ಏರ್ಪಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಸಚಿವ ಮುರುಗೇಶ್ ನಿರಾಣಿ ಮೇಲೆ ಕೂಡ ವಾಗ್ದಾಳಿ ನಡೆಸಿದ ಶಾಸಕ ಯತ್ನಾಳ್, ಸಿಡಿಯನ್ನು ಇಟ್ಟುಕೊಂಡು ಯಡಿಯೂರಪ್ಪ ಅವರಿಗೆ ಬೆದರಿಕೆ ಹಾಕಿ ಮುರುಗೇಶ್ ನಿರಾಣಿ ಸಚಿವರಾಗಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ.

ಈಗ ಕೆ ಎಸ್ ಈಶ್ವರಪ್ಪ ಮಾತ್ರವಲ್ಲ, ಸರ್ಕಾರದ ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಹಲವು ಸಚಿವರುಗಳಿಗೆ ಅಸಮಾಧಾನವನ್ನುಂಟುಮಾಡಿದೆ. ಹೈಕಮಾಂಡ್ ರಾಜ್ಯದ ಪಕ್ಷದ ಉಸ್ತುವಾರಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರಿಗೆ ನೀಡಿದೆಯೇ ಅಥವಾ ಸಿಎಂ ಮತ್ತು ಅವರ ಕುಟುಂಬಕ್ಕೆ ನೀಡಿದೆಯೇ ಎಂದು ನನಗೆ ಗೊಂದಲವಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.


Stay up to date on all the latest ರಾಜಕೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp