ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಪ್ರವಾಸ: ಈಶ್ವರಪ್ಪ ಮುನಿಸು ಶಮನ?

ಸಿಎಂ ಯಡಿಯೂರಪ್ಪ ವಿರುದ್ಧ ಪತ್ರ ಬರೆದು ಸಚಿವ ಈಶ್ವರಪ್ಪ ಅಸಮಾಧಾನ ಹೊರ ಹಾಕಿದ ನಂತರ ಮೊದಲ ಬಾರಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. 

Published: 08th April 2021 08:41 AM  |   Last Updated: 08th April 2021 08:41 AM   |  A+A-


Arun singh

ಅರುಣ್ ಸಿಂಗ್

Posted By : Shilpa D
Source : The New Indian Express

ಬೆಂಗಳೂರು: ಸಿಎಂ ಯಡಿಯೂರಪ್ಪ ವಿರುದ್ಧ ಪತ್ರ ಬರೆದು ಸಚಿವ ಈಶ್ವರಪ್ಪ ಅಸಮಾಧಾನ ಹೊರ ಹಾಕಿದ ನಂತರ ಮೊದಲ ಬಾರಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. 

ಮೂರು ದಿನಗಳ ಪ್ರವಾಸ ಕೈಗೊಂಡಿರುವ ಅರುಣ್ ಸಿಂಗ್ ಬೆಳಗಾವಿ, ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. 

ಕೇವಲ ಉಪ ಚುನಾವಣಾ ಪ್ರಚಾರಕ್ಕಾಗಿ ಅರುಣ್ ಸಿಂಗ್ ರಾಜ್ಯಕ್ಕೆ ಬರುತ್ತಿಲ್ಲ, ಈಶ್ವರಪ್ಪ ಪತ್ರ ಸಂಬಂಧ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ರಾಜ್ಯ ನಾಯಕರು ನಿರೀಕ್ಷೆಯಲ್ಲಿದ್ದಾರೆ. ಪತ್ರ ಸಂಬಂಧ ಈ ಹಿಂದೆಯೇ ಮಾತನಾಡಿದ್ದ ಅರುಣ್ ಸಿಂಗ್ ಉಪ ಚುನಾವಣೆ ನಂತರ ಇದರ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದರು.

ಗುರುವಾರ ಬೆಂಗಳೂರಿಗೆ ಆಗಮಿಸುವ ಅರುಣ್ ಸಿಂಗ್, ಮಧ್ಯಾಹ್ನ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಯೋಜಿಸಿರುವ ವಯಕ್ತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಮುಂದಿನ ಮೂರು ದಿನಗಳು ಅರುಣ್ ಸಿಂಗ್ ಬೆಳಗಾವಿ, ಮಸ್ಕಿ ಮತ್ತು ಬಸವಕಲ್ಯಾಣ ಉಪ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

Stay up to date on all the latest ರಾಜಕೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp