ಯಡಿಯೂರಪ್ಪ- ಈಶ್ವರಪ್ಪ ನಡುವೆ ಭಿನ್ನಾಭಿಪ್ರಾಯ ಶಮನ; ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ: ಅರುಣ್ ಸಿಂಗ್

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯ ಶಮನಗೊಂಡಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು
ಅರುಣ್ ಸಿಂಗ್
ಅರುಣ್ ಸಿಂಗ್

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯ ಶಮನಗೊಂಡಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ರಾಜ್ಯದ ಅಭಿವೃದ್ಧಿಗೆ ಅವರಿಬ್ಬರು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು. 

ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷವು ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.

ಉಪಚುನಾವಣೆ ನಡೆಯುವ ಮೂರೂ ಕ್ಷೇತ್ರಗಳಲ್ಲಿ ಕಾರ್ಯಕರ್ತರು ವಿಶೇಷ ಶ್ರಮ ವಹಿಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿರುವುದು ಪಕ್ಷದ ಗೆಲುವಿಗೆ ಪೂರಕವಾಗಿದೆ.ಕಾಂಗ್ರೆಸ್ ಪಕ್ಷ ಬಿಜೆಪಿ ವಿರುದ್ಧ ಷಡ್ಯಂತ್ರ ಮತ್ತು ಒಳಸಂಚು ರೂಪಿಸುತ್ತಿದೆ. ಕಾಂಗ್ರೆಸಿಗರು ಎಷ್ಟೇ ಪ್ರಯತ್ನ ಪಟ್ಟರೂ ಉಪಚುನಾವಣಾ ಕ್ಷೇತ್ರಗಳಲ್ಲಿ ಸೋಲುವುದು ಖಚಿತ ಎಂದು ಭವಿಷ್ಯ ನುಡಿದರು.

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ’ ಎಂದ ಅವರು, ‘ರಾಜ್ಯದಲ್ಲಿ ನಾಯಕತ್ವ ಬದಲಾವಣೆ’ ಬಗ್ಗೆ ಶಾಸಕ ಬಸನಗೌಡ ಯತ್ನಾಳ್ ನೀಡಿದ ಹೇಳಿಕೆ ಕುರಿತ ಪ್ರತಿಕ್ರಿಯಿಸಲು ನಿರಾಕರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com