ನೈಟ್ ಕರ್ಫ್ಯೂ ನಿಂದ ಯಾವುದೇ ಪ್ರಯೋಜನ ಇಲ್ಲ: ಡಿ.ಕೆ.ಶಿವಕುಮಾರ್

ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚನೆ ಬೆನ್ನಲ್ಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕಠಿಣ ನಿರ್ಬಂಧ ಘೋಷಿಸಿದ್ದಾರೆ. ಇಂದಿನಿಂದ ಏ. 20 ರವರೆಗೆ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚನೆ ಬೆನ್ನಲ್ಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕಠಿಣ ನಿರ್ಬಂಧ ಘೋಷಿಸಿದ್ದಾರೆ. ಇಂದಿನಿಂದ ಏ. 20 ರವರೆಗೆ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ನೈಟ್ ಕರ್ಫ್ಯೂಯಿಂದ ಯಾವುದೇ ಪ್ರಯೋಜನ ಇಲ್ಲ. ಜನರಿಗೆ ತೊಂದರೆ ನೀಡಿ, ಆರ್ಥಿಕ ಪರಿಸ್ಥಿತಿ ಹಾಳು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 

ಸರ್ಕಾರ ನಡೆಸಲು ಆಗದವರು ಅಧಿಕಾರಕ್ಕೆ ಬಂದರೆ ಹೀಗೇ ಆಗುವುದು. ಕೈ ಮೀರಿದ ಮೇಲೆ ಈಗ ಸರ್ವ ಪಕ್ಷಗಳನ್ನು ಕರೆದು ಮೀಟಿಂಗ್ ಮಾಡುತ್ತೇನೆಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹೇಳುತ್ತಿದ್ದಾರೆ. ಏನೆಲ್ಲ ಮಾಡಬಾರದಿತ್ತು ಅದನ್ನೆಲ್ಲ ಮಾಡಿ ಈಗ ಸರ್ವಪಕ್ಷಗಳ ಸಭೆಯ ಅಗತ್ಯತೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ದೇಶ ಮತ್ತು ರಾಜ್ಯದಲ್ಲಿ ಅನ್ಯಾಯ ಮಾಡಿದ್ದಾರೆ. ದೀಪ ಹಚ್ಚಿ, ಜಾಗಟೆ ಬಾರಿಸಿದರೂ ಏನೂ ಬದಲಾಗಿಲ್ಲ. ಕೊರೋನಾ ಸಾಂಕ್ರಾಮಿಕದ ಅವಧಿಯಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ನಡೆದಿದೆ. ನೇಕಾರರು ಸೇರಿದಂತೆ ಕೂಲಿ ಕಾರ್ಮಿಕರಿಗೆ ಸರಕಾರದ ಸಹಾಯ ಧನ ಮುಟ್ಟಿಲ್ಲ. ಕೊರೋನಾ ಸಂದರ್ಭದಲ್ಲಿ ರೂ.16,000 ಕೋಟಿಯನ್ನು ಯಾವ ರೀತಿ ಖರ್ಚು ಮಾಡಿದೆ, ಎಲ್ಲೆಲ್ಲಿ ರೂ.20 ಲಕ್ಷ ಕೋಟಿ ಖರ್ಚು ಮಾಡಿದೆ ಎಂಬೆಲ್ಲಾ ಲೆಕ್ಕವನ್ನೂ ಸಾರ್ವಜನಿಕರ ಮುಂದಿಡಲಿ ಎಂದು ರಾಜ್ಯ ಸರಕಾರಕ್ಕೆ ಅವರು ಸವಾಲು ಹಾಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com