ಭ್ರಷ್ಟಾಚಾರದಲ್ಲಿ ಯಡಿಯೂರಪ್ಪ ಸರ್ಕಾರ ದೇಶದಲ್ಲೇ ಅಗ್ರಸ್ಥಾನದಲ್ಲಿದೆ: ಸುರ್ಜೆವಾಲಾ ವಾಗ್ದಾಳಿ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯದ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ದೇಶದಲ್ಲೇ ನಂ.1 ಸ್ಥಾನದಲ್ಲಿದೆ’ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ. 
ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರು
ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರು

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯದ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ದೇಶದಲ್ಲೇ ನಂ.1 ಸ್ಥಾನದಲ್ಲಿದೆ’ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ, ಶಾಸಕರನ್ನು ಖರೀದಿಸಿ ಬಂದ ಅನೈತಿಕ ಸರ್ಕಾರವಿದು. ಜನಾದೇಶದಿಂದ ರಚನೆಯಾದುದಲ್ಲ. ಅವ್ಯವಹಾರ, ಅಕ್ರಮಗಳಿಂದಲೇ ಕೂಡಿರುವ ಆಡಳಿತದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಜನರಿಂದ ಆಯ್ಕೆಯಾಗಿ ಬಂದ ಸರ್ಕಾರ ಇದಲ್ಲ. ಅಲ್ಲದೇ ಭ್ರಷ್ಟಾಚಾರದಲ್ಲಿ ದೇಶಕ್ಕೆ ರಾಜ್ಯ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆ ಫಲಿತಾಂಶ ಬದಲಾವಣೆಯ ದಿಕ್ಸೂಚಿ ಆಗಲಿದೆ ಎಂದು ಹೇಳಿದ್ದಾರೆ.

ಗೃಹ ಸಚಿವ ಬೊಮ್ಮಾಯಿ ಇಲಾಖೆಯಲ್ಲಿ ಅಧಿಕಾರಿಗಳೇ ಕಚ್ಚಾಡುತ್ತಿದ್ದಾರೆ. ಅದನ್ನು ಸರಿದೂಗಿಸದ ಬೊಮ್ಮಾಯಿ ರಾಜ್ಯ ಹೇಗೆ ಸರಿಪಡಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ. 

ಇದೇ ವೇಳೆ ರಾಜ್ಯಪಾಲರಿಗೆ ಈಶ್ವರಪ್ಪ ಅವರು ಬರೆದ ಪತ್ರ ಕುರಿತು ಮಾತನಾಡಿ, ಸಚಿವರೊಬ್ಬರು ದೇಶದಲ್ಲೇ ಮೊದಲ ಬಾರಿಗೆ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬೆಳವಣಿಗೆ ಇಲ್ಲಿ ನಡೆದಿದೆ. ಆ ಸಚಿವ ಕೆ.ಎಸ್. ಈಶ್ವರಪ್ಪ ಸರಿಯೋ? ಮುಖ್ಯಮಂತ್ರಿ ಕ್ರಮ ಸರಿಯೋ? ಇಬ್ಬರಲ್ಲಿ ಯಾರಾದರೊಬ್ಬರು ರಾಜೀನಾಮೆ ಕೊಡಬೇಕು. ಅವರದೇ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ ‘ಬಿ.ವೈ. ವಿಜಯೇಂದ್ರ ತೆರಿಗೆ’ ಎನ್ನುವ ವಿಷಯದ ಬಗ್ಗೆ ಮಾತನಾಡಿದ್ದಾರೆ. ಇಷ್ಟಾದರೂ ಯಡಿಯೂರಪ್ಪ ಅಧಿಕಾರದಲ್ಲಿ ಉಳಿದಿರುವುದು ನಾಚಿಕೆಗೇಡಿನ ಸಂಗತಿ ಎಂದು ತಿಳಿಸಿದ್ದಾರೆ. 

ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಅದು ಸರಿಯಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡು ತಿದ್ದಿಕೊಳ್ಳಬೇಕು. ಇಲ್ಲವಾದಲ್ಲಿ, ಆ ಸಚಿವರ ರಾಜೀನಾಮೆ ಪಡೆಯಬೇಕು’ ಎಂದು ಒತ್ತಾಯಿಸಿದರು.

‘ವಿವಿಧ ಸಮಾಜಗಳು ಮೀಸಲಾತಿ ಕೇಳುತ್ತಿವೆ. ಆದರೆ, ಭರವಸೆ ಕೊಟ್ಟು ನಂತರ ಮರೆಯುವ ಕೆಲಸವನ್ನು ಸರ್ಕಾರ ಮರೆಯುತ್ತಿದೆ. ಸಾರಿಗೆ ನೌಕರರ ಮುಷ್ಕರಕ್ಕೆ ಮತ್ತು ಇದರಿಂದ ಜನರಿಗೆ ತೊಂದರೆ ಆಗಿರುವುದಕ್ಕೆ ಸರ್ಕಾರದ ನಿರ್ಲಕ್ಷ್ಯ ಧೋರಣೆಯೇ ಕಾರಣ’ ಎಂದು ದೂರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com