ಸತೀಶ್ ಜಾರಕಿಹೊಳಿ ರಾಜಕೀಯ ಜೀವನ ಅಂತ್ಯಗೊಳಿಸಲು ಡಿಕೆ ಶಿವಕುಮಾರ್ ಪಿತೂರಿ: ಕಟೀಲ್

ತಮ್ಮ ರಾಜಕೀಯ ಮಹಾತ್ವಾಕಾಂಕ್ಷೆಗಳಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ಪ್ರಾಬಲ್ಯ ಹೊಂದಿರುವ ಸತೀಶ್ ಜಾರಕಿಹೊಳಿ ಅವರ ರಾಜಕೀಯ ಜೀವನವನ್ನು ನಾಶ ಮಾಡಲು ಸಂಚು ನಡೆಸಿದ್ದಾರೆ.
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

ಬೆಳಗಾವಿ: ತಮ್ಮ ರಾಜಕೀಯ ಮಹಾತ್ವಾಕಾಂಕ್ಷೆಗಳಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ಪ್ರಾಬಲ್ಯ ಹೊಂದಿರುವ ಸತೀಶ್ ಜಾರಕಿಹೊಳಿ ಅವರ ರಾಜಕೀಯ ಜೀವನವನ್ನು ನಾಶ ಮಾಡಲು ಸಂಚು ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಲೋಕಸಭೆ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಮೂರು ಬಣಗಳಾಗಿ ವಿಭಜನೆಯಾಗಿದ್ದು ತಳ ಕಚ್ಚಿದೆ ಎಂದು ಟೀಕಿಸಿದ್ದಾರೆ.

ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಸ್ವಹಿತಾಸಕ್ತಿಗಾಗಿ ಪಕ್ಷವನ್ನು ಅಳಿವಿನ ಅಂಚಿಗೆ ತಂದಿದ್ದಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಸದ್ಯ ಮುಳುಗುತ್ತಿರುವ ಹಡಗಿನಂತಾಗಿದೆ, ಇದೇ ವೇಳೆ ಪ್ರಧಾನಿ ನರೇಂದದ್ರ ಮೋದಿ ಅವರ ಜನಪ್ರಿಯತೆಯಿಂದಾಗಿ ದೇಶಾದ್ಯಂತ ಬಿಜೆಪಿ ಹೆಚ್ಚು ಪ್ರಾಬಲ್ಯವಾಗುತ್ತಿದೆ ಎಂದು ಹೇಳಿದ್ದಾರೆ.

ಮೋದಿ ಆಳ್ವಿಕೆಯಿಂದಾಗಿ ಪ್ರಪಂಚವೇ ಭಾರತವನ್ನು ತಿರುಗಿ ನೋಡುವಂತಾಗಿದೆ ಎಂದು ತಿಳಿಸಿದ್ದಾರೆ.
ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲುವಿನತ್ತ ಮತ ಚಲಾಯಿಸುವ ಮೂಲಕ ಬೆಳಗಾವಿಯ ಜನರು ಮೋದಿಯಲ್ಲಿ ಹೆಚ್ಚಿನ ಶಕ್ತಿಯನ್ನು ತುಂಬಬೇಕು ಎಂದು ಮನವಿ ಮಾಡಿದ್ದಾರೆ.

ಕೇಂದ್ರ ರೈಲ್ವೆ ಮಾಜಿ ರಾಜ್ಯ ಸಚಿವ ಸುರೇಶ್ ಅಂಗಡಿಯವರ ಹಠಾತ್ ನಿಧನವು ನಮ್ಮನ್ನು ಆಘಾತಕ್ಕೊಳಗಾಗಿಸಿದೆ ಎಂದು ಹೇಳಿದ ಕಟೀಲ್,  ಸರಳ ಮತ್ತು ಸಮರ್ಥ ನಾಯಕನಾಗಿದ್ದು, ಕರ್ನಾಟಕದ ರೈಲು ಕ್ಷೇತ್ರದ ಅಭಿವೃದ್ಧಿಗೆ ಸಚಿವರಾಗಿ ಸಾಕಷ್ಟು ಹಣವನ್ನು ಅಂಗಡಿ ತಂದಿದ್ದರು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com