ರಾಜ್ಯಪಾಲರ ಸರ್ವಪಕ್ಷ ಸಭೆ ಸಂವಿಧಾನಬಾಹಿರ: ಸಿದ್ದರಾಮಯ್ಯ

ರಾಜ್ಯಪಾಲರು ಸರ್ವಪಕ್ಷಗಳ ಸಭೆ ಕರೆದಿದ್ದು ಸಂವಿಧಾನ ಬಾಹಿರ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಪಾಲರು ಸರ್ವಪಕ್ಷಗಳ ಸಭೆ ಕರೆದಿದ್ದು ಸಂವಿಧಾನ ಬಾಹಿರ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಮಂಗಳವಾರ ಸರ್ವಪಕ್ಷಗಳ ಸಭೆಯಲ್ಲಿ ವಿಡಿಯೋ ಸಂವಾದದ ಮೂಲಕ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರದ್ದು ಅಸಂವಿಧಾನಿಕ ನಡೆ. ಇದೂವರೆಗೆ ಯಾರೂ ಈ ರೀತಿ ನಡೆದುಕೊಂಡಿರಲಿಲ್ಲ. ಮುಖ್ಯಮಂತ್ರಿಗಳು ಸರ್ವಪಕ್ಷ ಸಭೆ ಕರೆದು ಮಾಹಿತಿ ಪಡೆದುಕೊಳ್ಳಬಹುದಷ್ಟೇ. ಅವರಿಗೆ ಗೌರವ ಕೊಡುವುದರಿಂದ ನಾನು ಸಭೆಯಲ್ಲಿ ಪಾಲ್ಗೊಂಡಿದ್ದೆ ಎಂದು ಹೇಳಿದ್ದಾರೆ. 

ಅಡ್ವೋಕೇಟ್ ಜನರಲ್ ಅವರಿಂದ ಅಭಿಪ್ರಾಯ ಪಡೆದಿದ್ದಾರೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ನನಗೆ ಸಂವಿಧಾನದ ಬಗ್ಗೆ ಇರುವ ಜ್ಞಾನದ ಪ್ರಕಾರ ಈ ಸಭೆಯನ್ನು ರಾಜ್ಯಪಾಲರು ಕರೆದಿದ್ದು, ಸಂವಿಧಾನ ಬಾಹಿರ. ರಾಜ್ಯಪಾಲರು ಸಭೆ ಕರೆದಿರುವುದರಿಂದ ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದಾಯಿತು. ಸರ್ಕಾರ ಇಲ್ಲದಿದ್ದಾಗ ಮಾತ್ರ ರಾಜ್ಯಪಾಲರು ಪ್ರವೇಶ ಮಾಡುತ್ತಾರೆ. ಈಗ ಚುನಾಯಿತ ಸರ್ಕಾರ ಇಲ್ಲ ಅನ್ನುವುದಕ್ಕೆ ಇದೇ ಸಾಕ್ಷಿ. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com