ಬಿಜೆಪಿ ಪಂಚ ಪ್ರಶ್ನೆಗೆ 'ದಶ ಪ್ರಶ್ನೆ' ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ!

ಬಿಜೆಪಿ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಪಕ್ಷ ಕೇಳಿರುವ ಐದು ಪ್ರಶ್ನೆಗಳಿಗೆ 10 ಪ್ರಶ್ನೆಗಳನ್ನು ಕೇಳುವ ಮೂಲಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಪಕ್ಷ ಕೇಳಿರುವ ಐದು ಪ್ರಶ್ನೆಗಳಿಗೆ 10 ಪ್ರಶ್ನೆಗಳನ್ನು ಕೇಳುವ ಮೂಲಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. 

ಆಡಳಿತ ನಡೆಸುವವರ ಕೆಲಸ ಪ್ರಶ್ನೆ ಕೇಳುವುದಲ್ಲ, ಜನರ ಪ್ರಶ್ನೆಗಳಿಗೆ ಉತ್ತರ ನೀಡುವುದು. ತಮ್ಮದು ವಿರೋಧ ಪಕ್ಷ ಅಲ್ಲ, ಆಡಳಿತಾರೂಢ ಪಕ್ಷ ಎನ್ನುವುದನ್ನು ರಾಜ್ಯ ಬಿಜೆಪಿ ಏನಾದರೂ ಮರೆತುಬಿಟ್ಟಿದೆಯಾ ಹೇಗೆ? ಪ್ರಶ್ನೆ ಕೇಳುವ ಅಷ್ಟೊಂದು ಹುಚ್ಚಿದ್ದರೆ‌ ಮರ್ಯಾದೆಯಿಂದ ರಾಜೀನಾಮೆ ಕೊಟ್ಟು ವಿರೋಧ ಪಕ್ಷದಲ್ಲಿ ಕೂತುಕೊಂಡು ಪ್ರಶ್ನೆ ಕೇಳಿ, ನಾವು ಉತ್ತರಿಸುತ್ತೇವೆ. 

ರಾಜ್ಯ ಬಿಜೆಪಿ ನಾಯಕರು ಬೆಳಿಗ್ಗೆ ಎದ್ದು ಪತ್ರಿಕೆಗಳನ್ನು ಓದುವ ಅಭ್ಯಾಸ ಬೆಳೆಸಿಕೊಂಡರೆ ಅವರಿಗೂ ಹಿತ, ರಾಜ್ಯಕ್ಕೂ ಹಿತ. ಕೊರೊನಾ ಎರಡನೆ ಅಲೆಯಿಂದ ತತ್ತರಿಸಿಹೋಗಿರುವ ಜನತೆ ಪ್ರಶ್ನಿಸುತ್ತಿರುವುದು ಆಡಳಿತವಪಕ್ಷವನ್ನು, ವಿರೋಧಪಕ್ಷವನ್ನು ಅಲ್ಲ ಎನ್ನುವುದು ನೆನಪಿರಲಿ. 

ಸೌಜನ್ಯಪೂರ್ವಕವಾಗಿ ನೆರವು ನೀಡಿ ಎಂದು ಪ್ರಧಾನಿಯವರನ್ನು ಕೋರಿದ್ದೆ. ಅಂತಹ ಸೌಜನ್ಯಪೂರಿತ ನಡವಳಿಕೆಗೆ ನೀವು ಯೋಗ್ಯರಲ್ಲ. ನೆರವು ನೀಡಲು ನೀವು ದಾನಿಗಳಲ್ಲ, ಪಡೆಯಲು ನಾವು ನಿಮ್ಮ ಮನೆಮುಂದೆ ನಿಂತ ಭಿಕ್ಷುಕರೂ ಅಲ್ಲ. ಆರುವರೆ ಕೋಟಿ ಜನ ಬೆವರಗಳಿಕೆಯಲ್ಲಿ ಪಾವತಿಸಿರುವ ತೆರಿಗೆಹಣದಲ್ಲಿ ಕರ್ನಾಟಕದ ಪಾಲು ಕೇಳುತ್ತಿದ್ದೇವೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com