

ಬೆಂಗಳೂರು: ಕೋವಿಡ್-19 ಲಸಿಕೆ ವಿಚಾರದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ಆರೋಪ, ಪ್ರತ್ಯಾರೋಪ ತಾರಕಕ್ಕೇರಿದೆ.
ಲಸಿಕೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, ನಕಲಿ ಗಾಂಧಿ ಕುಟುಂಬ ಯಾವ ದೇಶದ ಲಸಿಕೆಗಾಗಿ ಕಾಯುತ್ತಿದೆ ಎಂದು ಪ್ರಶ್ನಿಸಿದೆ.
ಮೋದಿ ಲಸಿಕೆ ತೆಗೆದುಕೊಳ್ಳದೆ ಜನಸಾಮಾನ್ಯರ ಮೇಲೆ ಪ್ರಯೋಗ ಮಾಡಿದರು ಎಂದು ಡಿಕೆ ಶಿವಕುಮಾರ್ ಹೇಳುತ್ತಾರೆ. ಇಂತಹ ಸುಳ್ಳನ್ನು ಯಾವುದೇ ನಾಚಿಕೆಯಿಲ್ಲದೆ ಹೇಳುವ ಬದಲು ಮೊದಲು ನೀವು ಲಸಿಕೆ ತೆಗೆದುಕೊಳ್ಳಿ ಎಂದು ಸಲಹೆ ನೀಡಿದೆ.
Advertisement