'ಟೀಕಾ ಉತ್ಸವ್' ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ, ಎಲ್ಲರಿಗೂ ಉಚಿತ ಲಸಿಕೆ ನೀಡಿ'

ಕೇರಳ, ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಬಿಹಾರ ಸೇರಿದಂತೆ ಸುಮಾರು 17 ರಾಜ್ಯಗಳು 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತ ಲಸಿಕೆಗಳನ್ನು ಘೋಷಿಸುತ್ತಿದ್ದು, ಕರ್ನಾಟಕ ಕೂಡ ಇದೇ ಮಾದರಿ ಅನುಸರಿಸಬೇಕು ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಸರ್ಕಾರವನ್ನು ಒತ್ತಾಯಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೇರಳ, ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಬಿಹಾರ ಸೇರಿದಂತೆ ಸುಮಾರು 17 ರಾಜ್ಯಗಳು 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತ ಲಸಿಕೆಗಳನ್ನು ಘೋಷಿಸುತ್ತಿದ್ದು, ಕರ್ನಾಟಕ ಕೂಡ ಇದೇ ಮಾದರಿ ಅನುಸರಿಸಬೇಕು ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಸರ್ಕಾರವನ್ನು ಒತ್ತಾಯಿಸಿದೆ.

ರಾಜ್ಯ ಸರ್ಕಾರ ಸುಮಾರು 400 ಕೋಟಿ ರು ವೆಚ್ಚದಲ್ಲಿ ಒಂದು ಕೋಟಿ ಕೋವೀಶೀಲ್ಡ್ ಲಸಿಕೆಗೆ ಆರ್ಡರ್ ನೀಡಿದೆ, ಮೊದಲ ಹಂತದಲ್ಲಿ 18 ವರ್ಷ ತುಂಬಿದ ಎಲ್ಲರಿಗೂ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ, ಆದರೆ ಲಸಿಕೆಯನ್ನು ಉಚಿತವಾಗಿ ನೀಡಬೇಕೆ ಅಥವಾ ಸಬ್ಸಿಡಿಯಲ್ಲಿ ನೀಡಬೇಕೆ ಎಂಬ ಬಗ್ಗೆ ಇನ್ನೂ ಸರ್ಕಾರ ನಿರ್ಧರಿಸಿಲ್ಲ, 

ಸೋಮವಾರ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡುವ ಸಾಧ್ಯತೆಯಿದೆ. ಈ ಮಧ್ಯೆ, ಎಲ್ಲಾ ವಯಸ್ಸಿನ ನಾಗರಿಕರಿಗೆ ಲಸಿಕೆಗಳನ್ನು ಉಚಿತವಾಗಿ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ನಾಯಕರು, ಒತ್ತಾಯಿಸಿದ್ದಾರೆ. "ಲಸಿಕೆ ಬೆಲೆಗಳನ್ನು ವಿಶ್ವದಾದ್ಯಂತ  ಉಚಿತವಾಗಿ ನೀಡುತ್ತಿರುವಾಗ ಭಾರತ ಮಾತ್ರ
ಲಸಿಕೆ ಬೆಲೆ ಬಗ್ಗೆ ಚರ್ಚಿಸುತ್ತಿರುವ ದೇಶವಾಗಿದೆ. ಕರ್ನಾಟಕ ಏಕೆ ಇನ್ನೂ ಉಚಿತ ಲಸಿಕೆ ಘೋಷಿಸಿಲ್ಲ ಎಂದು ವಿಪಕ್ಷಗಳು ಪ್ರಶ್ನಿಸಿವೆ. ರಾಜ್ಯದ ಎಲ್ಲಾ ಜನರಿಗೆ ಉಚಿತವಾಗಿ ಲಸಿಕೆ ನೀಡುವಂತೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ  ಶಿವಕುಮಾರ್ ಆಗ್ರಹಿಸಿದ್ದಾರೆ.

ಲಸಿಕೆ‌ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಬಿಜೆಪಿ ಸರ್ಕಾರ, ಅದರ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ. ನರೇಂದ್ರ ಮೋದಿಯವರೇ 'ಟೀಕಾ ಉತ್ಸವ್' ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಲಸಿಕೆ‌ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಕೇಂದ್ರ ಬಿಜೆಪಿ ಸರ್ಕಾರ, ಲಸಿಕೆ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ ಎಂದು ಹೇಳಿದ್ದಾರೆ.

ಲಸಿಕೆ ಉಚಿತವಾಗಿ ನೀಡುವುದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಹೆಚ್ಚಾಗಲಿದೆ, ಹೀಗಾಗಿ ಲಸಿಕೆಗೆ ದರ ನಿಗದಿ ಮಾಡಲು ಸೋಮವಾರ ನಡೆಯುವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com