'ಯಡಿಯೂರಪ್ಪ ಅವರೇ, ಸೋಂಕನ್ನು ರಾಜ್ಯದಾದ್ಯಂತ ಹಬ್ಬಿಸುವ ಹರಕೆಯನ್ನು ಯಾವ ದೇವರಿಗೆ ಹೊತ್ತಿದ್ದೀರಿ?’

ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಕೊರೋನಾ ಸೋಂಕನ್ನು ರಾಜ್ಯದಾದ್ಯಂತ ಹಬ್ಬಿಸುವ ಹರಕೆಯನ್ನು ಯಾವ ದೇವರಿಗೆ ಹೊತ್ತಿದ್ದೀರಿ?’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಕೊರೋನಾ ಸೋಂಕನ್ನು ರಾಜ್ಯದಾದ್ಯಂತ ಹಬ್ಬಿಸುವ ಹರಕೆಯನ್ನು ಯಾವ ದೇವರಿಗೆ ಹೊತ್ತಿದ್ದೀರಿ?’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಹಳ್ಳಿಗಳಿಗೆ ತೆರಳಿದವರಿಗೆ ಕಡ್ಡಾಯ ಕ್ವಾರಂಟೈನ್ ಹಾಗೂ ಸೋಂಕು ಪರೀಕ್ಷೆ ನಿಯಮ ರೂಪಿಸಿಲ್ಲ. ನಗರಗಳಲ್ಲಿ, ಕಿಕ್ಕಿರಿದು ತುಂಬಿದ ಬಸ್ಸುಗಳಲ್ಲಿ ಅಂಟಿದ ಸೋಂಕು ಹಳ್ಳಿ ಹಳ್ಳಿಗಳಿಗೆ ತಲುಪಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಬಿಜೆಪಿ ಸರ್ಕಾರದ ಬೌದ್ಧಿಕ ದಿವಾಳಿತನ ಹಾಗೂ ಪೂರ್ವ ತಯಾರಿ ಇಲ್ಲದ ಏಕಾಏಕಿಯ ಲಾಕ್‌ಡೌನ್‌ನಿಂದಾಗಿ ಸೋಂಕು ನಿಯಂತ್ರಿಸುವ ಬದಲಿಗೆ ಇನ್ನಷ್ಟು ಹಬ್ಬಿಸಲು ಕಾರಣವಾಗಲಿದೆ. ಹೆಚ್ಚುವರಿಯಾಗಿ ಬಿಎಂಟಿಸಿ ಬಸ್‌ಗಳನ್ನು ಉಪಯೋಗಿಸಿಕೊಂಡು ಶೇ 50ರಷ್ಟು ನಿಯಮ ಪಾಲನೆಯಲ್ಲಿ ಸಾರಿಗೆ ವ್ಯವಸ್ಥೆ ನಿರ್ಮಿಸಬಹುದಿತ್ತು. ಆದರೆ, ಸರ್ಕಾರ ಕಂಬಳಿ ಹೊದ್ದು ಮಲಗಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.

‘ರಾಜ್ಯದಲ್ಲಿ ಮಂತ್ರಿಗಳಿಗೆ ಬೆಡ್‌ ಸಿಗುತ್ತಿಲ್ಲ. ಸಾಮಾನ್ಯರ ಸ್ಥಿತಿ ಇನ್ನೂ ಭೀಕರ’ ಎಂದು ರಾಜ್ಯ ಸರ್ಕಾರವನ್ನು ಕಾಂಗ್ರೆಸ್‌ ಟೀಕಿಸಿದೆ. ಸಚಿವರಾದ ಎಂಟಿಬಿ ನಾಗರಾಜ್‌ ಅವರು ತಮಗೇ ಬೆಡ್ ಸಿಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಇತ್ತ ಮಾಧುಸ್ವಾಮಿ ಪ್ರಭಾವಕ್ಕೂ ಬೆಡ್ ಸಿಗಲಿಲ್ಲ. ಮಂತ್ರಿಗಳಿಗೆ ಹೀಗಾದರೆ ಜನ ಸಾಮಾನ್ಯರ ಸ್ಥಿತಿ ಇನ್ನೂ ಭೀಕರ’ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com