ರಾಜ್ಯದಲ್ಲಿ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿದೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶವೇ ನಿದರ್ಶನ: ಸಿದ್ದರಾಮಯ್ಯ

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿರುವುದು ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ವಿಪಕ್ಷ ನಾಯಕರೂ ಆಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿರುವುದು ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ವಿಪಕ್ಷ ನಾಯಕರೂ ಆಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಚುನಾವಣೆ ಫಲಿತಾಂಶ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಕೊರೋನಾದಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹೀಗಾಗಿ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವ ಮೂಲಕ ಜನ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಜನತೆಯ ಕೆಂಗಣ್ಣಿಗೆ ಗುರಿಯಾಗಿರುವುದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಉತ್ತಮ ಎಂದಿದ್ದಾರೆ.

ನಗರ ಸ್ಥಳಿಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವಿಗೆ ಕಾರಣರಾದ ಮತದಾರರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೃತಜ್ಞತೆ ಹಾಗೂ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ಆಶೀರ್ವಾದ ಮಾಡಿರುವ ಮತದಾರರ ನಿರೀಕ್ಷೆ ಹುಸಿಯಾಗದ ರೀತಿಯಲ್ಲಿ ಕೆಲಸ ಮಾಡಿ ಎಂದು ಗೆಲುವು ಸಾಧಿಸಿರುವ ಅಭ್ಯರ್ಥಿಗಳಿಗೆ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com