ಮಡಿಕೇರಿ ನಗರಸಭೆ ಚುನಾವಣೆ: ಬಿಜೆಪಿಗೆ ಸ್ಪಷ್ಟ ಬಹುಮತ

ಕೊರೋನಾ ಎರಡನೇ ಅಲೆಯ ಬಿಕ್ಕಟ್ಟಿನ ನಡುವೆಯೇ ಏಪ್ರಿಲ್ 27 ರಂದು ನಡೆದ ಮಡಿಕೇರಿ ನಗರಸಭೆ ಚುನಾವಣೆಯಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ.
ಗೆದ್ದ ಬಿಜೆಪಿ ಅಭ್ಯರ್ಥಿಗಳು
ಗೆದ್ದ ಬಿಜೆಪಿ ಅಭ್ಯರ್ಥಿಗಳು

ಮಡಿಕೇರಿ: ಕೊರೋನಾ ಎರಡನೇ ಅಲೆಯ ಬಿಕ್ಕಟ್ಟಿನ ನಡುವೆಯೇ ಏಪ್ರಿಲ್ 27 ರಂದು ನಡೆದ ಮಡಿಕೇರಿ ನಗರಸಭೆ ಚುನಾವಣೆಯ
ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ.

ಮಡಿಕೇರಿ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ನಗರಸಭೆಯ ಒಟ್ಟು 23 ಸ್ಥಾನಗಳ ಪೈಕಿ ಬಿಜೆಪಿ 16, ಎಸ್.ಡಿ.ಪಿ.ಐ 5, ಕಾಂಗ್ರೆಸ್ 1 ಹಾಗೂ ಜೆಡಿಎಸ್ 1 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಇಂದು ಬೆಳಗ್ಗೆ 10 ಗಂಟೆಯಿಂದ ಸೇಂಟ್ ಜೋಸೆಫ್ಸ್ ಕನ್ವೆನ್ಷನ್ ಶಾಲೆಯಲ್ಲಿ ಮತ ಎಣಿಕೆ ನಡೆಸಲಾಯಿತು ಮತ್ತು ಇದಕ್ಕೆ ಸೀಮಿತ ಸಂಖ್ಯೆಯ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರು ಸಾಕ್ಷಿಯಾದರು. ಕೊರೋನಾ ಹಿನ್ನೆಲೆಯಲ್ಲಿ ಸಂಭ್ರಮಾಚಾರಣೆಯನ್ನು ಸಹ ನಿಷೇಧಿಸಲಾಗಿದೆ.

ಇನ್ನು ಫಲಿತಾಂಶದ ಬಗ್ಗೆ ಸಂತೋಷ ವ್ಯಕ್ತಪಡಿಸಿದ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಅವರು, “ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಪಕ್ಷ ಅಭಿವೃದ್ಧಿ ಕಾರ್ಯಗಳಿಗೆ ಸಾಕ್ಷಿಯಾದ ನಂತರ ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ. ಪಕ್ಷದ ಹೊಸ ಅಭ್ಯರ್ಥಿಗಳು ಕೂಡ ಗೆದ್ದಿದ್ದಾರೆ” ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com