ನಮ್ಮ ಸಹಕಾರವಿದೆ, ತಡ ಮಾಡದೆ ಮೇಕೆದಾಟು ಯೋಜನೆ ಆರಂಭಿಸಿ: ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್

ಮೇಕೆದಾಟು ಯೋಜನೆಗೆ ನಾವು ಸಹಕಾರ ನೀಡುತ್ತೇವೆ. ತಡ ಮಾಡದೆ ಸರ್ಕಾರ ಯೋಜನೆ ಆರಂಭಿಸಲಿ ಎಂದು ರಾಜ್ಯ ಕಾಂಗ್ರೆಸ್ ಶನಿವಾರ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮೇಕೆದಾಟು ಯೋಜನೆಗೆ ನಾವು ಸಹಕಾರ ನೀಡುತ್ತೇವೆ. ತಡ ಮಾಡದೆ ಸರ್ಕಾರ ಯೋಜನೆ ಆರಂಭಿಸಲಿ ಎಂದು ರಾಜ್ಯ ಕಾಂಗ್ರೆಸ್ ಶನಿವಾರ ಹೇಳಿದೆ.

ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ನಮ್ಮ ಪಾಲಿನ ನೀರು ಬಳಕೆಗೆ ಮೇಕೆದಾಟು ಯೋಜನೆ ಪ್ರಯೋಜನಕಾರಿ. ಈ ಯೋಜನೆ ಮಾಡಬಾರದು ಎಂದು ಯಾವ ಆದೇಶವೂ ಇಲ್ಲ. ತಮಿಳುನಾಡಿನ ಬಿಜೆಪಿ, ಡಿಎಂಕೆ ಅಥವಾ ಬೇರೆ ಪಕ್ಷಗಳು ಏನಾದರೂ ಮಾಡಿಕೊಲ್ಳಲಿ. ನಾನು ಸಂಪೂರ್ಣ ಸಹಕಾರ ನೀಡುತ್ತೇವೆ. ರಾಜ್ಯ ಸರ್ಕಾರ ಯೋಜನೆ ಆರಂಭಿಸಲಿ ಎಂದು ಹೇಳಿದ್ದಾರೆ. 

ಯೋಜನೆಯಿಂದ 1 ಎಕರೆಗೂ ನೀರು ಬಳಸಿಕೊಳ್ಳುವುದಿಲ್ಲ. ವಿದ್ಯುತ್ ಉತ್ಪಾದನೆ ಹಾಗೂ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀರಾವರಿ ಸಚಿವರಾಗಿದ್ದವರು. ಅವರಿಗೆ ಆ ಯೋಜನೆ ಬಗ್ಗೆ ಅರಿವಿದೆ. ಪರಿಸರ ಇಲಾಖೆ ಅನುಮತಿ ಸಿಕ್ಕಿರುವಾಗ ಬೊಮ್ಮಾಯಿಯವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು, ಇತರೆ ಇಲಾಖೆಗಳ ಅನುಮತಿ ಪಡೆಯಲಿ. ಆದಷ್ಟು ಬೇಗ ಗುದ್ದಲಿ ಪೂಜೆ ಮಾಡಿ, ಕೆಲಸ ಆರಂಭಿಸಲಿ. ಬೇರೆಯವರ ಮೇಲೆ ದೂರುತ್ತಾ ಕೂರುವುದಲ್ಲ. ಕೆಲಸ ಆರಂಭಿಸಬಿಡಿ ಎಂದು ಯಾವುದಾದರೂ ಆದೇಶ ಇದೆಯಾ? ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com