ಬೊಮ್ಮಾಯಿ ಸಂಪುಟ ಸೇರಲು ಲಾಬಿ: ಯಡಿಯೂರಪ್ಪರನ್ನು ಭೇಟಿಯಾದ ಬಿಜೆಪಿ ಶಾಸಕರು

ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿರುವ ಬಸವರಾಜ ಬೊಮ್ಮಾಯಿಯವರಿಗೆ ಸಂಪುಟ ರಚನೆಯ ಸವಾಲು ಎದುರಾಗಿದ್ದು, ವರಿಷ್ಠರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. 
ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ನಾಯಕರು
ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ನಾಯಕರು

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿರುವ ಬಸವರಾಜ ಬೊಮ್ಮಾಯಿಯವರಿಗೆ ಸಂಪುಟ ರಚನೆಯ ಸವಾಲು ಎದುರಾಗಿದ್ದು, ವರಿಷ್ಠರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. 

ಈ ನಡುವೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬೊಮ್ಮಾಯಿ ಸಂಪುಟ ಸೇರಲು ಶಾಸಕರು ಬಿಎಸ್​ವೈ ಜೊತೆ ಲಾಬಿ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ. 

ತೀರ್ಥಹಳ್ಳಿ ಶಾಸಕ ಅರಗ ಜ್ಞಾ‌ನೇಂದ್ರ ಹಾಗೂ ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಬೆಂಬಲಿಗರ ಜೊತೆ ಆಗಮಿಸಿ ಇಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಸಂಪುಟದಲ್ಲಿ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಶಾಸಕ ಅರಗ ಜ್ಞಾನೇಂದ್ರ ಅವರು, ಯಡಿಯೂರಪ್ಪನವರ ಭೇಟಿಯಲ್ಲಿ ವಿಶೇಷವೇನಿಲ್ಲ. ಬೆಂಗಳೂರಿಗೆ ಬಂದಾಗಲೆಲ್ಲಾ ಯಡಿಯೂರಪ್ಪನವರನ್ನು ಭೇಟಿ ಮಾಡುತ್ತೇನೆ. ನನ್ನನ್ನು ಸಚಿವ ಸಂಪುಟಕ್ಕೆ ಸೇರಿಸದಿರಲು ಯಾವುದೇ ಕಾರಣಗಳು ಇಲ್ಲ. ಯಡಿಯೂರಪ್ಪನವರಿಗೆ ನನ್ನ ಮೇಲೆ ಅನುಕಂಪ ಇದೆ. ನಾನು ಅವರ ಜೊತೆ ಜೊತೆಯಲ್ಲಿ ಬೆಳೆದವನು. ನನ್ನನ್ನು ಬಿಎಸ್​ವೈ ಗುರುತಿಸುತ್ತಾರೆ, ಸಂಘ ಸಹ ಗುರುತಿಸುತ್ತದೆ. ಈ ಬಾರಿ ಸಚಿವನಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com