ಕೊಳ್ಳೇಗಾಲ: ಉಚ್ಚಾಟಿತ ಬಿಎಸ್ ಪಿ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆಗೆ ಮೂಹೂರ್ತ ಫಿಕ್ಸ್

ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್‌.ಮಹೇಶ್‌ ಅವರ ಬಿಜೆಪಿ ಸೇರ್ಪಡೆಗೆ ಕೊನೆಗೂ ದಿನ ನಿಗದಿಯಾಗಿದೆ. ಆ.5ರಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಹೇಶ್‌ ಅವರು ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಎನ್.ಮಹೇಶ್
ಎನ್.ಮಹೇಶ್

ಕೊಳ್ಳೇಗಾಲ: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್‌.ಮಹೇಶ್‌ ಅವರ ಬಿಜೆಪಿ ಸೇರ್ಪಡೆಗೆ ಕೊನೆಗೂ ದಿನ ನಿಗದಿಯಾಗಿದೆ. ಆ.5ರಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಹೇಶ್‌ ಅವರು ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಲಿದ್ದಾರೆ. 

ಬಿಎಸ್ಪಿಯಿಂದ ಆಯ್ಕೆಯಾಗಿದ್ದ ಎನ್‌.ಮಹೇಶ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಆ ಬಳಿಕ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಮಹೇಶ್‌ ಅವರು ಬಿಜೆಪಿಗೆ ಹತ್ತಿರವಾಗುತ್ತಿದ್ದರು. ಬಿಜೆಪಿ ಸೇರ್ಪಡೆಯಾಗುವುದಾಗಿ ಇತ್ತೀಚೆಗೆ ಬಹಿರಂಗವಾಗಿಯೇ ಹೇಳಿಕೊಂಡಿದ್ದರು. 

ನಾನು ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರುತ್ತಿದ್ದೇನೆ. ಯಡಿಯೂರಪ್ಪ ಅವರ ಮುಂದೆ ಪಕ್ಷ ಸೇರ್ಪಡೆಯ ಇಂಗಿತ ಮುಂದಿಟ್ಟಾಗ ಅವರು ಶೀಘ್ರವೇ ಸೇರಿ ಎಂದು ಆಹ್ವಾನ ನೀಡಿದರು. ಹಾಗಾಗಿ ನಮ್ಮ ಕಾರ್ಯಕರ್ತರು, ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಿ ಆ.5ರಂದು ಬಿಜೆಪಿ ಸೇರಲಿದ್ದೇನೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com